ಸುರಪುರ: ಕಳೆದ ಮೂರು ದಿನಗಳಿಂದ ವಾಂತಿ ಭೇದಿಯಿಂದ ತಾಲೂಕು ಆಸ್ಪತ್ರೆಗೆ ದಾಖಲಾಗಿರುವ ತಾಲೂಕಿನ ಮಾಚಗುಂಡಾಳ ಗ್ರಾಮದ ರೋಗಿಗಳಿಗೆ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷರು ಹಾಗು ಶಾಸಕ ರಾಜುಗೌಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.ಆಸ್ಪತ್ರೆಯಲ್ಲಿನ ಎಲ್ಲಾ ಕೋಣೆಗಳಲ್ಲಿ ದಾಖಲಾಗಿರುವ ೩೮ ಜನ ರೋಗಿಗಳನ್ನು ಪ್ರತಿಯೊಬ್ಬರನ್ನು ಭೇಟಿ ಮಾಡಿ ಆರೋಗ್ಯದ ಕುರಿತು ವಿಚಾರಿಸಿದರು, ಅಲ್ಲದೆ ಯಾವುದೇ ಕಾರಣಕ್ಕೂ ಧೈರ್ಯ ಬಿಡಬೇಡಿ ಆದಷ್ಟು ಬೇಗನೆ ಗುಣಮುಖರಾಗಲಿದ್ದೀರಿ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,ಎಲ್ಲರನ್ನು ತುಂಬಾ ಕಾಳಜಿಯಿಂದ ನೋಡಿಕೊಳ್ಳಿ ಮತ್ತು ಆದಷ್ಟು ಬೇಗನೆ ಎಲ್ಲರು ಗುಣಮುಖರಾಗುವಂತೆ ನೋಡಿಕೊಳ್ಳಲು ತಿಳಿಸಿದರು.ಅಲ್ಲದೆ ಎಲ್ಲರ ಆರೋಗ್ಯ ಸುಧಾರಣೆಗೆ ಬೇಕಾದ ಎಲ್ಲಾ ರೀತಿಯ ಚಿಕಿತ್ಸೆಗೆ ನೆರವನ್ನು ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಮಾತನಾಡಿ,ಕಳೆದ ಮೂರು ದಿನಗಳಿಂದ ಎಲ್ಲರಿಗೂ ಹಗಲಿರಳು ಗಮನಿಸಲಾಗುತ್ತಿದ್ದು,ಬಹುತೇಕರ ಆರೋಗ್ಯ ಸುಧಾರಿಸಿದೆ ಎಂದು ವಿವರಣೆ ನೀಡಿದರು. ನಂತರ ಮಾಚಗುಂಡಾಳ ಗ್ರಾಮ್ಕಕೆ ತೆರಳಿದ ಶಾಸಕರು ಮಾಚಗುಂಡಾಳ ಗ್ರಾಮದಲ್ಲಿ ನೀರು ಸರಬರಾಜು ಮಾಡುವ ಟ್ಯಾಂಕರ್ ಮತ್ತು ತೆರೆದ ಬಾವಿಯನ್ನು ಪರಿಶೀಲಿಸಿದರು ಅಲ್ಲದೆ ಟ್ಯಾಂಕರ್ ಸ್ವಚ್ಛತೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರಲ್ಲದೆ ಗ್ರಾಮದಲ್ಲಿ ಹೊಸದಾಗಿ ಬೋರವೆಲ್‌ಗಳನ್ನು ಹಾಕಲು ತಿಳಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ತಾಲೂಕು ಪಂಚಾಯತಿ ಇಒ ಅಂಬ್ರೇಶ ಮೂಡಲದಿನ್ನಿ ಹಾಗು ಮುಖಂಡರಾದ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್,ದೊಡ್ಡದೇಸಾಯಿ ದೇವರಗೋನಾಲ,ಬಲಭೀಮನಾಯಕ ಬೈರಿಮಡ್ಡಿ,ಶರಣು ನಾಯಕ ಬೈರಿಮಡ್ಡಿ,ಸಿದ್ದನಗೌಡ ಕರಿಬಾವಿ,ವೆಂಕಟೇಶ ನಾಯಕ ಬೈರಿಮಡ್ಡಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…