ನಟಿ ಚಂದನಾ ರಾಘವೇಂದ್ರ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆರ್ಟ್ಸ್‌, ಕ್ರಾಫ್ಟ್‌ ಮೇಳಕ್ಕೆ ಚಾಲನೆ

0
18

ಬೆಂಗಳೂರು: ಕರೋನಾ ಸಾಂಕ್ರಾಮಿಕ ಹಾಗೂ ಲಾಕ್‌ಡೌನ್‌ ನಿಂದ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರಿಗೆ ಉತ್ತಮ ಶಾಪಿಂಗ್‌ ನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಸೆಪ್ಟೆಂಬರ್‌ 17 ರಿಂದ 26 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ ೭ ಗಂಟೆಯವರೆಗೆ ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಫ್ಟ್‌ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. ಈ ಮೇಳಕ್ಕೆ ಇಂದು ನಟಿ ಚಂದನ ರಾಘವೇಂದ್ರ ಚಾಲನೆ ನೀಡಿದರು.

ಕರೋನಾ ಲಾಕ್‌ಡೌನ್‌ ನಿಂದಾಗಿ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರ ಶಾಪಿಂಗ್‌ ಥೆರಪಿಗೆ ಬೇಕಾಗಿರುವ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ.

Contact Your\'s Advertisement; 9902492681

ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ ಎಂದು ನಟಿ ಚಂದನಾ ರಾಘವೇಂದ್ರ ತಿಳಿಸಿದರು.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here