ಶಹಾಬಾದ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ವತಿಯಿಂದ ಶುಕ್ರವಾರ ಭಂಕೂರ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ತರಗತಿಯನ್ನು ಉದ್ಘಾಟನೆ ಮಾಡಲಾಯಿತು.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಜಿಲ್ಲಾ ಸಂಯೋಜಕ ಶರಣಪ್ಪ ವಸ್ತ್ರದ್ ಮಾತನಾಡಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ವತಿಯಿಂದ ಗ್ರಾಮೀಣ ಪ್ರದೇಶದ ಮಕ್ಕಳು ನೂತನತಂತ್ರಜ್ಞಾನದ ಶಿಕ್ಷಣದ ಮೂಲಕ ಹೆಚ್ಚು ಕಲಿಯುವಂತಾಗಲು ಸ್ಮಾರ್ಟ ಕ್ಲಾಸ್ ನಡೆಸಲು ಅಗತ್ಯ ನೆರವನ್ನು ನೀಡುತ್ತಿದೆ.
ಈ ಭಾಗದ ಮಕ್ಕಳು ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು.ಅಲ್ಲದೇ ಶಿಕ್ಷಕರು ಮಕ್ಕಳ ಶ್ರೇಯೋಭಿವೃದ್ಧಿಗೆ ಸಹಕರಿಸಿ, ಸ್ಮಾರ್ಟ ಕ್ಲಾಸ್‍ನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರಲ್ಲದೇ ಕಲ್ಯಾಣ ಕರ್ನಾಟಕ ವತಿಯಿಂದ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.
ಭಂಕೂರ ಗ್ರಾಪಂ ಅಧ್ಯಕ್ಷೆ ರಾಜಶ್ರೀ ರಜನಿಕಾಂತ ಕಂಬಾನೂರ ಮಾತನಾಡಿ,ಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಆಧುನಿಕತೆಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆಯಿದೆ.ನೂತನ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಕಲಿಕೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘ ಸ್ಮಾರ್ಟ ತರಗತಿ ನಡೆಸಲು ಅನುಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯವಾದುದು.ಅಲ್ಲದೇ ಶಿಕ್ಷಕರು ಹಾಗೂ ಮಕ್ಕಳು ಇದರ ಸಂಪರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಶಹಾಬಾದ-ವಾಡಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ತಾಲೂಕಾ ಸಂಯೋಜಕ ಮಲ್ಲಿಕಾರ್ಜುನ ಇಟಗಿ, ಗ್ರಾಪಂ ಸದಸ್ಯ ಈರಣ್ಣ ಕಾರ್ಗಿಲ್ ಮಾತನಾಡಿದರು.
ಮುಖ್ಯಗುರು ಮಾರ್ಥ.ಸಿ, ಸುನೀಲ ಗುಡೂರ್, ಭೀಮಬಾಯಿ ಗುಂಡಪ್ಪ, ಸಿಆರ್‍ಪಿ ಮರೆಪ್ಪ ಭಜಂತ್ರಿ ಸೇರಿದಂತೆ ಶಿಕ್ಷಕರು ಇದ್ದರು.