ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ *ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯಕುಮಾರ್* ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾಗಿದೆ. ರಾಜ್ಯದಲ್ಲಿ ನಡೆದ ಎಲ್ಲಾ ಕಾರ್ಯಕ್ರಮಗಳಲ್ಲೂ ಅತಿ ಹೆಚ್ಚು 1039 ಯುನಿಟ್ ರಕ್ತವನ್ನು ಸಂಗ್ರಹಿಸಿದ ಹೆಗ್ಗಳಿಕೆ ಈ ಕಾರ್ಯಕ್ರಮದ್ದಾಗಿದೆ.
ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದು ಸಾವಿರ ಯೂನಿಟ್ ರಕ್ತವನ್ನು ಸಂಗ್ರಹಿಸಿ ದೇಶದಲ್ಲಿನ ರಕ್ತಹೀನ ರೋಗಿಗಳ ಪಾಲಿನ ಸಂಜೀವಿನ ಆಗುವ ನಿಟ್ಟಿನಲ್ಲಿ ತಾಲ್ಲೂಕು ಬಿಜೆಪಿ ಹಾಗೂ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ ನಿಗದಿಪಡಿಸಿದ್ದ ಗುರಿಯನ್ನು ಸಾಧಿಸಿದ್ದೇವೆ. ತಾಲ್ಲೂಕಿನ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ ಕಾರಣ ನಿಗದಿತ ಗುರಿಯನ್ನು ಸಾಧಿಸಿದ್ದೇವೆ.
ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಢುವ ಮೂಲಕ ಮೋದಿ ಅವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು *ಸಂಜೀವಿನಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯಕುಮಾರ್ ತಿಳಿಸಿದರು*.
ನಿನ್ನೆ ಬೃಹತ್ ರಕ್ತಧಾನ ಶಿಬಿರವನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಉಚಿತವಾಗಿ ಹೆಲ್ಮೇಟ್ ವಿತರಣೆ ಹೀಗೆ ಹತ್ತು ಹಲವು ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.
ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರಿಗೆ ಇದೇ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…