ಕಲಬುರಗಿ :ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಏರ್ಪಡಿಸಿದ್ದ 2021 ಕಲ್ಬುರ್ಗಿ ಉತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಅಭಿನಂದನೆ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ವಲಯದ ಪ್ರಾಥಮಿಕ ಆರೋಗ್ಯ ಇಲಾಖೆಯ ಹಿರಿಯ ಸಹಾಯಕ ಡಾಕ್ಟರ್ ಅನಂತರೆಡ್ಡಿ ಯವರ ಸೇವೆಯನ್ನು ಗುರುತಿಸಿ ಹಾಗೂ ನೋವೆಲ್ ಕೋರೋಣ 19 ವೈರಾಣು ಸಾಂಕ್ರಾಮಿಕ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಮೂಢನಂಬಿಕೆಯನ್ನು ಹೋಗಲಾಡಿಸಿ ಜನರಲ್ಲಿ ಧೈರ್ಯವನ್ನು ತುಂಬಿದ ಕೋವಿಡ್ ಲಸಿಕೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಥಮಿಕ ಆರೋಗ್ಯ ಇಲಾಖೆಯ ಹಿರಿಯ ಸಹಾಯಕ ಡಾ.ಅನಂತ ರೆಡ್ಡಿ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಪ್ರಶಸ್ತಿ ಪತ್ರ ಅಭಿನಂದನೆ ಸಲ್ಲಿಸಲಾಯಿತು .
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಬಸವರಾಜ್ ಬೊಮ್ಮಾಯಿ ಅವರು ಭಾಗವಹಿಸಿದ್ದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸೇರಿದಂತೆ ಜೇವರ್ಗಿ ತಾಲೂಕ ವೈದ್ಯಾಧಿಕಾರಿಗಳು ಸಿದ್ದು ಪಾಟೀಲ್ , ಈಜೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು ಉಮೇಶ್ ಶರ್ಮ ,ಹಾಗೂ ಶ್ರೀಮತಿ ಸ್ನೇಹಲತಾ ,ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಕುಮಾರಿ ಯಶೋಧ, ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…