ಬಿಸಿ ಬಿಸಿ ಸುದ್ದಿ

ಭಾರತದ ಬಯೋಟೆಕ್ ರಾಜಧಾನಿ ಬೆಂಗಳೂರು: ಕೇಂದ್ರ ಸಚಿವ ಪಿಯೂಷ್ ಗೋಯಲ್

ಬೆಂಗಳೂರು: ಕರ್ನಾಟಕ ದೇಶದಲ್ಲಿಯೇ ಅತ್ಯಂತ ಕ್ರಿಯಾಶೀಲ ರಾಜ್ಯವಾಗಿದ್ದು, ಹಲವು ಹೊಸತನಗಳ ಮತ್ತು ನವೋದ್ಯಮಗಳ ಉಗಮ ಸ್ಥಾನವಾಗಿದ್ದು, ಭಾರತದ ಬಯೋಟೆಕ್ನಾಲಜಿಯ ರಾಜಧಾನಿ ಬೆಂಗಳೂರು ಆಗಿದೆ ಎಂದು ಕೇಂದ್ರ ಜವಳಿ, ಗ್ರಾಹಕರ ವ್ಯವಹಾರ, ಆಹಾರ ಹಾಗೂ ನಾಗರೀಕ, ಕೈಗಾರಿಕೆ ಹಾಗೂ ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್ ಅವರು ಹರ್ಷ ವ್ಯಕ್ತಪಡಿಸಿದರು.

ಇಂದು ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIಖಿ-ಃ)ಆವರಣದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಉದ್ಯಮ ಹಾಗೂ ನವೋದ್ಯಮ ಪ್ರತಿನಿಧಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿ ಜಾಗತಿಕ ಮಹಾಮಾರಿ ಕೋವಿಡ್ ನಿಯಂತ್ರಣಕ್ಕಾಗಿ ಭಾರತ್ ಬಯೋಟೆಕ್ನಾಲಜಿಯಂತಹ ಸಂಸ್ಥೆಯ ಕೊಡುಗೆ ಅಪಾರ, ದೇಶದ ಆರ್ಥಿಕ ಅಭಿವೃದ್ಧಿಗಾಗಿ ಬೆಂಗಳೂರು ನವೋದ್ಯಮದ ಮೂಲಕ ತನ್ನದೇ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

ಸರ್ಕಾರದ ಮಟ್ಟದಲ್ಲಿ ದೇಶದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂತಹ ಸಂವಾದಗಳು ಸಹಾಯವಾಗುತ್ತವೆ, ಇಲ್ಲಿನ ಸಂವಾದದ ಸಾರಂಶದ ಅಂಶಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ನವದೆಹಲಿಗೆ ಬೇಟಿ ನೀಡಿ ತಮ್ಮ ಅಭಿಪ್ರಾಯಗಳನ್ನು ನೇರವಾಗಿ ಹಂಚಿಕೊಳ್ಳಲು ಅವಕಾಶವಿದೆ.

ಕೋವಿಡ್ ಸಮಯದಲ್ಲಾದ ಆರ್ಥಿಕ ತಲ್ಲಣಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಉದ್ಯಮಗಳ ಉಳಿವಿಗಾಗಿ ಹಾಗೂ ಬೆಳವಣಿಗೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನವೋದ್ಯಮಿಗಳ ಪ್ರೋತ್ಸಾಹಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ನೇರವಾಗಿ ವಿವಿಧ ಕ್ಷೇತ್ರದ ಉದ್ಯಮಿಗಳ ಜೊತೆ ನಡೆಸುವ ಈ ರೀತಿಯ ಸಂವಾದಗಳು ಸರ್ಕಾರದ ಮಟ್ಟದಲ್ಲಿ ಹೊಸ ಕಾನೂನು ಹಾಗೂ ಯೋಜನೆಗಳನ್ನು ರೂಪಿಸುವಲ್ಲಿ ಸಹಾಯಕವಾಗುತ್ತವೆ, ಸಚಿವನಾಗಿ ನಾನು ಈ ರೀತಿಯ ಸಂವಾದಗಳಿಗೆ ಸದಾ ಕಿವಿಯಾಗಿರುತ್ತೇನೆ, ನಮ್ಮ ದೇಶದ ಉದ್ಯಮಿಗಳ ಬಗ್ಗೆ ಗೌರವವಿದೆ. ಜಗತ್ತಿನ ಶ್ರೇಷ್ಠ ರಪ್ತು ಉದ್ಯಮವನ್ನು ಸ್ಥಾಪಿಸುವ ಮೂಲಕ ಪ್ರದಾನ ಮಂತ್ರಿಗಳ ಆತ್ಮ ನಿರ್ಭರ ಭಾರತವನ್ನು ಕಟ್ಟಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಕರೆ ಕೊಟ್ಟರು.

ಇಂದಿನ ಸಂವಾದದಲ್ಲಿ ಕೆಲವು ಸಂಸ್ಥೆಗಳ ಮುಖ್ಯಸ್ಥರು ನೀಡಿದ ಸಲಹೆಗಳನ್ನು ಮತ್ತು ಸಮಸ್ಯೆಗಳನ್ನು ತಮಗೆ ನೇರವಾಗಿ ಪತ್ರ ಬರೆಯುವ ಮೂಲಕ ಪರಿಹಾರ ಕಂಡುಕೊಳ್ಳಲು ತಿಳಿಸಿದರು ಹಾಗೂ ಸಂಬಂಧ ಪಟ್ಟ ಇತರೆ ಇಲಾಖೆಗಳೊಂದಿಗೆ ತಾವು ಮಾತುಕತೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಿಕೊಡುವುದಾಗಿ ಭರವಸೆ ನೀಡಿದರು. ಇದೊಂದು ವಿಭಿನ್ನವಾದ ಮತ್ತು ಅತ್ಯುತ್ತಮ ಸಂವಾದವಾಗಿದ್ದು ತಮಗೆ ಅನೇಕ ಒಳಹುಗಳನ್ನು ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸಂವಾದದದಲ್ಲಿ ಮಾಹಿತಿ-ತಂತ್ರಜ್ಞಾನದ ರಾಜ್ಯ ಸರ್ಕಾರದ ಕಾರ್ಯದರ್ಶಿಗಳಾದ ರಮಣ ರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯದ ಕೊಡುಗೆ ಹಾಗೂ ಸ್ಥಾನಮಾನದ ಕುರಿತು ಮಾತನಾಡಿ ಸಚಿವರಿಗೆ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಹಿರಿಯ ಅಧಿಕಾಗಳು ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳಾದ ಶ್ರೀಮತಿ ಮೀನಾ ನಾಗರಾಜ್, ಇನ್ ಫೋಸಿಸ್ ಸಂಸ್ಥೆಯ ಸ್ಥಾಪಕ ಸದಸ್ಯರಾದ ಕ್ರಿಸ್ ಗೋಪಾಲ್ ಸೇರಿದಂತೆ ಹಲವಾರು ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ಸಂವಾದದ ನಂತರ “ಜಿಸಿಸಿ ಇಂಡಿಯಾ ಲ್ಯಾಂಡಸ್ಕೇಪ್ 2021 & ಬಿಯಾಂಡ” ಕಿರು ಪುಸ್ತಕವನ್ನು ಬಿಡುಗಡೆ ಮಾಡಿ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಆಯೋಜಿಸಿದ್ದ ನಾವಿನ್ಯತಾ ಉದ್ಯಮದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago