ಶಹಾಬಾದ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಕಟ್ಟಡ ಕಾರ್ಮಿಕರಿಂದ(ಸಿಐಟಿಯು) ವತಿಯಿಂದ ಸೆಪ್ಟೆಂಬರ್ ೨೦ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆ ಹಾಗೂ ಮುಖ್ಯಮಂತ್ರಿ ಮನೆ ಚಲೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ತಾಲೂಕಾ ಸಂಚಾಲಕ ನಾಗಪ್ಪ ರಾಯಚೂರಕರ್ ತಿಳಿಸಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ಸರಕಾರ ಎರಡನೇ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಕಾರ್ಮಿಕರಿಗೆ ೩೦೦೦ರೂ. ಪರಿಹಾರ ನೀಡುತ್ತೆವೆ ಎಂದು ಹೇಳಿತ್ತು.ಆದರೆ ಇವರೆಗೂ ಹಣ ಕೈಸೇರಿಲ್ಲ. ಶೈಕ್ಷಣಿಕ ಸಹಾಯ ಧನಕ್ಕೆ ನೀಡುವುದಾಗಿ ಹೇಳಿ ಅರ್ಜಿ ಸಲ್ಲಿಸುವುದನ್ನು ನಿಲ್ಲಿಸಿದ್ದಾರೆ.ಕಾರ್ಮಿಕರ ಕಾರ್ಡ ಆನ್‌ಲೈನ್ ನೊಂದಣಿಯನ್ನು ನಿಲ್ಲಿಸಲಾಗಿದೆ.ಕೋವಿಡ್‌ನಿಂದ ಮೃತಪಟ್ಟ ಕಾರ್ಮಿಕರಿಗೆ ೨ ಲಕ್ಷ ರೂ. ಪರಿಹಾರ ನೀಡಿಲ್ಲ.
ಅಲ್ಲದೇ ಕಾರ್ಮಿಕರ ಕಲ್ಯಾಣಕ್ಕಾಗಿ ನಿರ್ಮಾಣ ಮಾಡಿದ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರ ಆಹಾರ ಕಿಟ್‌ನಲ್ಲಿ ಬ್ರಹ್ಮಾಂಡ ಭಷ್ಟಾಚಾರ ನಡೆದಿದೆ.ಆ ಬಗ್ಗೆ ತನಿಖೆ ನಡೆಯಬೇಕು ಸೇರಿದಂತೆ ಸಹಜ ಮರಣ ಪರಿಹಾರದ ಮೊತ್ತ ಹೆಚ್ಚಿಸಬೇಕು.ಮನೆ ಮನಿರ್ಮಾಣಕ್ಕೆ ೫ ಲಕ್ಷ ರೂ. ಸಹಾಯ ಧನ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನ ಮುಖ್ಯಮಂತ್ರಿ ಮನೆ ಚಲೋ ಕಾರ್ಯಕ್ರಮವನ್ನುಹಮ್ಮಿಕೊಂಡಿದ್ದೆವೆ ಎಂದು ನಾಗಪ್ಪ ತಿಳಿಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…