ಶಹಾಬಾದ: ಸಾಧನೆ ಎಂಬುದು ಯಾರ ಸ್ವತ್ತಲ್ಲ.ಅದು ಸಾಧಕನ ಸ್ವತ್ತು ಎಂಬುದಕ್ಕೆ ಭಂಕೂರ ಗ್ರಾಮದ ಚೇತನ.ಎಸ್.ರಾವೂರ ಅವರೇ ಉದಾಹರಣೆಯಾಗಿದ್ದಾರೆ ಎಂದು ಚಿತ್ತಾಪೂರ ಬಿಜೆಪಿ ಅಧ್ಯಕ್ಷ ನೀಲಕಂಠರಾವ ಪಾಟೀಲ ಹೇಳಿದರು.
ಅವರು ರವಿವಾರ ಭಂಕೂರ ಗ್ರಾಮದ ಚೇತನ್ ಶರಣಪ್ಪ ರಾವೂರ್ ಅವರು ಭಾರತೀಯ ವಾಯುಸೇನೆಗೆ ಆಯ್ಕೆಯಾಗಿದ್ದಕ್ಕೆ ಭಂಕೂರ ಗ್ರಾಮದ ವತಿಯಿಂದ ಆಯೋಜಿಸಲಾದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಪ್ರತಿಭೆಯ ಅನಾವರಣಕ್ಕೆ ಇಂದು ವಿಭಿನ್ನ ಅವಕಾಶಗಳಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಮುದಾಯದ ಸಹಕಾರವನ್ನು ಪರಿಪೂರ್ಣವಾಗಿ ಪಡೆದು ಶೈಕ್ಷಣಿಕ ಸಾಧನೆಗೆ ಬಳಸಿಕೊಳ್ಳಬೇಕು ಎಂದರು.
ಭಂಕೂರ ಗ್ರಾಪಂ ಸದಸ್ಯ ಲಕ್ಷ್ಮಿಕಾಂತ ಕಂದಗೂಳ ಮಾತನಾಡಿ, ಸಾಧನೆಗೆ ಬೇಕಿರುವುದು ಗಂಭೀರ ಆಸಕ್ತಿ. ಸಾಧನೆ ಸಾಧಕನ ಸ್ವತ್ತೇ ವಿನಃ ಸೋಮಾರಿಯ ಸ್ವತ್ತಲ್ಲ. ಶೈಕ್ಷಣಿಕವಾಗಿ ಇಂದು ಅನೇಕ ಅವಕಾಶಗಳಿದ್ದು ಪರಿಪೂರ್ಣ ಮಾಹಿತಿಯೊಂದಿಗೆ ಲಭ್ಯ ಅವಕಾಶಗಳನ್ನು ಬಳಸಿಕೊಳ್ಳುವ ಚಿಂತನೆ ವಿದ್ಯಾರ್ಥಿಗಳಲ್ಲಿ ಬರಬೇಕು. ನಿರಂತರ ಪರಿಶ್ರಮ ಮತ್ತು ವಿಭಿನ್ನ ಆರೋಗ್ಯಕರ ಚಿಂತನೆಗಳು ಮನುಷ್ಯನನ್ನು ಪರಿಪೂರ್ಣನನ್ನಾಗಿಸುತ್ತವೆ. ಕನಸುಗಳನ್ನು ಸಾಕಾರಗೊಳಿಸಿಕೊಳ್ಳುವ ಸಾಧನೆ ಎಲ್ಲರ
ಆದ್ಯತೆಯಾಗಿರಬೇಕು. ಮಹತ್ತನ್ನೇ ಯೋಚಿಸಬೇಕು. ಆಗ ಮಾತ್ರ ಸಣ್ಣ ಪ್ರಮಾಣದ ಸಾಧನೆಯಾದರೂ ಕೈಗೆಟುಕುತ್ತದೆ ಎಂದರು.
ಗ್ರಾಪಂ ಸದಸ್ಯ ಈರಣ್ಣ ಕಾರ್ಗಿಲ್ ಮಾತನಾಡಿ, ಪರಿಶ್ರಮದ ಬದುಕು ಯಾವಾಗಲೂ ಉತ್ತಮವಾದ ಭವಿಷ್ಯವನ್ನೇ ಕೊಡುತ್ತದೆ. ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವೈವಿಧ್ಯಮಯ ಆಯ್ಕೆಗಳ ಸಾಧ್ಯಾಸಾಧ್ಯತೆಯನ್ನು ಅರಿತುಕೊಳ್ಳಬೇಕು. ಆ ಮೂಲಕ ಸಾಮಾಜಿಕ ಕ್ಷೇತ್ರದಲ್ಲೂ ಗುರ್ತಿಸಿಕೊಳ್ಳುವಂತಾಗಬೇಕು. ಶೈಕ್ಷಣಿಕ ಸಾಧನೆ ನಿಂತನೀರಾಗ ಬಾರದು. ನಿರಂತರತೆಯನ್ನು ಕಾಯ್ದುಕೊಳ್ಳಬೇಕು ಎಂದರು.
ಯಲ್ಲಾಲಿಂಗ ನಾಗೂರ್, ಪ್ರಕಾಶ ಪಾಟೀಲ, ಸಂತೋμï ಕಲಶೆಟ್ಟಿ, ಈರಪ್ಪ ಹೂಗಾರ್. ಮಲ್ಲಿಕಾರ್ಜುನ ಶಿರಗೊಂಡ, ಭರತ್ ಮುತ್ತಗಾ, ಮಂಜುನಾಥ ರೆಡ್ಡಿ, ಗಂಗಾರಾಮ, ಶಿವಕುಮಾರ ಟೆಂಗಳಿ,ಮಲ್ಲಿಕಾರ್ಜುನ ಮಾಲಗತ್ತಿ, ಚಂದ್ರಕಾಂತ ಮಾಚನೂರ,ಉಮೇಶ ಗುತ್ತೆದಾರ, ಪ್ರಶಾಂತ ಮಾನಕರ್ ಸೇರಿದಂತೆ ಇತರರು ಹಾಜರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…