ಕಲ್ಯಾಣ ಕರ್ನಾಟಕದ ಜನಪ್ರತಿನಿಧಿಗಳ ಶ್ರೀಘ್ರ ಸಭೆಗೆ ಸಿಎಂಗೆ ದಸ್ತಿ ಆಗ್ರಹ

0
31

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ರಚನಾತ್ಮಕ ಅಭಿವೃದ್ಧಿಯ ಬಗ್ಗೆ ಮತ್ತು ಸಂವಿಧಾನದ ೩೭೧ನೇ(ಜೆ) ಕಲಂ ತಿದ್ದುಪಡಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿ ಕಲ್ಯಾಣ ಕರ್ನಾಟಕ ಪ್ರದೇಶದ ಸಚಿವರ, ಸಂಸದರ, ಶಾಸಕರ ಮತ್ತು ಪರಿಣಿತ ಹೋರಾಟಗಾರರ ಸಭೆಯನ್ನು ಶೀಘ್ರದಲ್ಲಿ ಕರೆಯಬೇಕೆಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸೆ. 15 ರಂದು ಸಮಿತಿ ನಿಯೋಗ ಮುಖ್ಯಮಂತ್ರಿಗಳಿಗೆ ಭೇಟಿ ನೀಡಿದ ವೇಳೆ ಸಭೆ ಕರೆಯುವ ಭರವಸೆ ನೀಡಿದರಲ್ಲದೆ, ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಂದರ್ಭದಲ್ಲಿ ಸಹ ಅಧಿಕೃತವಾಗಿ ಪ್ರಕಟಿಸಿದರು.

Contact Your\'s Advertisement; 9902492681

ಮುಖ್ಯಮಂತ್ರಿಗಳ ಘೋಷಣೆಯಂತೆ ಆದಷ್ಟು ಶೀಘ್ರ ಸಭೆ ಕರೆದು ಕಲ್ಯಾಣ ಕರ್ನಾಟಕ ಪ್ರದೇಶದ ಕಾಲಮಿತಿಯ ಪ್ರಗತಿಗೆ ವಿಶೇಷ ಯೋಜನೆಗಳನ್ನು ರೂಪಿಸಲು ಅದರಂತೆ ೩೭೧ನೇ(ಜೆ) ಕಲಂ ತಿದ್ದುಪಡಿಯಲ್ಲಿರುವ ದೋಷಗಳ ನಿವಾರಣೆಗೆ ಮತ್ತು ಖಾಲಿ ಇರುವ ಸಹಸ್ರಾರು ಹುದ್ದೆಗಳ ಭರ್ತಿ ಸೇರಿದಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಪರ ವಿಷಯಗಳಿಗೆ ಸಂಬಂಧಿಸಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಉನ್ನತ ಅಧಿಕಾರಿಗಳನ್ನೊಳಗೊಂಡು ಸಭೆ ನಿಯೋಜಿಸಿ ಕಲ್ಯಾಣ ಕರ್ನಾಟಕ ಪ್ರದೇಶದ ಕಲ್ಯಾಣದ ಬಗ್ಗೆ ವಿಶೇಷ ಮುತುವರ್ಜಿ ವಹಿಸಲು ಸಮಿತಿಯಿಂದ  ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಸಭೆಯನ್ನು ಕಲ್ಯಾಣ ಕರ್ನಾಟಕದ ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಲು ಸಭೆ ನಿಯೋಜಿಸುವ ಬಗ್ಗೆ ಬದ್ಧತೆ ಪ್ರದರ್ಶಿಸಲು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here