ಶಹಾಬಾದ: ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಪಂಯಲ್ಲಿ ಅಂಗವಿಕಲರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸವಂತೆ ಆಗ್ರಹಿಸಿ ಮಂಗಳವಾರ ವಿವಿಧ ಸಂಘಟನೆಗಳ ವತಿಯಿಂದ ಕಾರ್ಮಿಕ ಮುಖಂಡ ಸುನೀಲ ಮಾನ್ಪಡೆ ನೇತೃತ್ವದಲ್ಲಿ ತಾಪಂ ಇಓ ಲಕ್ಷ್ಮಣ ಶೃಂಗೇರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ತೊನಸನಹಳ್ಳಿ(ಎಸ್) ಗ್ರಾಪಂಯಲ್ಲಿ ೧೪ ನೇ ಹಣಕಾಸು ಯೋಜನೆಯಡಿ ಸುಮಾರು ೪೦ ಹೊಲಿಗೆ ಯಂತ್ರಗಳನ್ನು ಖರೀದಿಸಲಾಗಿದೆ. ಆದರೆ ಅಂಗವಿಕಲರಿಗೆ ನೀಡಬೇಕಾದ ಹೊಲಿಗೆಯಂತ್ರಗಳನ್ನು ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಕೂಡಲೇ ಹೊಲಿಗೆ ಯಂತ್ರಗಳನ್ನು ಫಲಾನುಭವಿಗಳಿಗೆ ನೀಡಬೇಕು. ಇಲ್ಲದಿದ್ದರೇ ಇದೇ ಸೆಪ್ಟೆಂಬರ್ ೨೩ ರಂದು ಗ್ರಾಪಂ ಎದುರುಗಡೆ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೆವೆ ಹೇಳಿದರು.
ಈ ಸಂದರ್ಭದಲ್ಲಿ ಅಂಗವಿಕಲ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಿ ಭಜಂತ್ರಿ, ದಲಿತ ವಿದ್ಯಾರ್ಥಿ ಒಕ್ಕೂಟದ ತಾಲೂಕಾ ಸಂಚಾಲಕ ಪೂಜಪ್ಪ ಮೇತ್ರೆ, ಕರವೇ ಅಧ್ಯಕ್ಷ ವಿಶ್ವರಾಜ ಫಿರೋಜಾಬಬಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಣ್ಣ ಕಾರೊಳ್ಳಿ ಇದ್ದರು.