ಬೆಂಗಳೂರು: ಭೀಕರ ಬರಗಾಲಕ್ಕೆ ನಲುಗಿರುವ ಜನತೆಯ ಸಂಕಷ್ಟಗಳಿಗೆ ಸ್ಪಂಧಿಸಬೇಕಿದ್ದ ಶಾಸಕರು ಹಾಗೂ ವಿರೋಧ ಪಕ್ಷ ಬಿಜೆಪಿ ಅಧಿಕಾರಕ್ಕಾಗಿ ಸರ್ಕಾರವನ್ನು ಅಸ್ಥಿರಗೊಳಿಸಲಾಗುತ್ತಿದೆ ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜ್ ಟೀಕಿಸಿದ್ದಾರೆ.
ರಾಜ್ಯ ಭೀಕರ ಬರಗಾಲವನ್ನೆದುರಿಸುತ್ತಿದೆ ಮತ್ತು ರೈತರ ಆತ್ಮಹತ್ಯೆಗಳು ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ಜನಪ್ರತಿನಿಧಿಗಳಾದ ರಾಜ್ಯದ ಶಾಸಕರು ಮತ್ತು ವಿರೋಧ ಪಕ್ಷ ಬಿಜೆಪಿ, ಮುಂಬರುವ ವಿಧಾನ ಸಭಾ ಅಧಿವೇಶನದಲ್ಲಿ ರಚನಾತ್ಮಕ ಚರ್ಚೆಯಲ್ಲಿ ತೊಡಗಿ ಜನತೆಗೆ ಸರಿಯಾದ ಪರಿಹಾರ ಹುಡುಕ ಬೇಕಾಗಿತ್ತು. ಆದರೆ ಅದರ ಬದಲಾಗಿ ಜನಪರವಾದ ಈ ಕೆಲಸಗಳನ್ನು ಸಂಪೂರ್ಣಾವಾಗಿ ಕಡೆಗಣಿಸಿ, ಕೇವಲ ಅಧಿಕಾರದಾಹಿ ಮನೋಭಾವದಿಂದ ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು, ರಾಜ್ಯಪಾಲರಿಗೆ ರಾಜಿನಾಮೆ ನೀಡುವ ಮೂಲಕ ರಾಜ್ಯದ ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸಲಾಗುತ್ತಿದೆ. ಬಿಜೆಪಿಯ ಪ್ರಯತ್ನಕ್ಕೆ ಕುಮ್ಮಕ್ಕು ನೀಡಿದ ರಾಜ್ಯದ ರಾಜಕಿಯ ಬೆಳವಣಿಗೆ ತೀವ್ರ ನಾಚಿಕೆಗೇಡಿನದ್ದಾಗಿದ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸಿದೆ ಎಂದರು.
ಈ ಬೆಳವಣಿಗೆ ರಾಜ್ಯದ ಮತದಾರರು ಮತನೀಡಿ ಇವರನ್ನು ಅಯ್ಕೆ ಮಾಡಿದ್ದುದರ ಕರ್ತವ್ಯದ ತೀವ್ರ ದುರುಪಯೋಗವಾಗಿದೆ. ಮತದಾರರು ಇದನ್ನು ಗಮನಿಸಲಿದ್ದಾರೆಂಬ ಕನಿಷ್ಠ ಭಯವು ಇಲ್ಲದ ನಿರ್ಲಜ್ಯ ನಡೆಯಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ನಿರಂತರವಾಗಿ ರಾಜ್ಯ ಮೈತ್ರಿ ಸರಕಾರಕ್ಕೆ ಅಗತ್ಯ ಮತದಾರರ ಬೆಂಬಲವಿಲ್ಲವೆಂದು ಸುಳ್ಳು ಹೇಳಿ ಜನರನ್ನು ವಂಚಿಸುತ್ತಿರುವ ಮತ್ತು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಮತ್ತು ಶಾಸಕರನ್ನು ಖರೀದಿಸುವ ಕುದುರೆ ವ್ಯಾಪಾರಕ್ಕೆ ಪ್ರಚೋದನೆ ನೀಡುವುದನ್ನೇ ಕಾಯಕ ಮಾಡಿಕೊಂಡಿರುವ ವಿರೋಧ ಪಕ್ಷ ಬಿಜೆಪಿ ಮತ್ತು ಅದರ ಮುಖಂಡತ್ವಕ್ಕೆ ಹಾಗೂ ಇಂತಹ ಅಧಿಕಾರದಾಹಿ ಮನೋಭಾವದ ಮತ್ತು ತಮ್ಮನ್ನೇ ಮಾರಾಟಕ್ಕಿಟ್ಟುಕೊಂಡ ಶಾಸಕರಿಗೆ ಸರಿಯಾದ ಪಾಠವನ್ನು ಕಲಿಸಬೇಕೆಂದು ಜನತೆಗೆ ಕರೆ ನೀಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…