ಬಿಸಿ ಬಿಸಿ ಸುದ್ದಿ

ಕಲಬುರಗಿ: ಸೆಪ್ಟೆಂಬರ್ 24 ರಂದು ಉದ್ಯೋಗ ಮೇಳ

ಕಲಬುರಗಿ: ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಪ್ರತಿಷ್ಠಿತ 20 ಕಂಪನಿಗಳ ಸಹಯೋಗದೊಂದಿಗೆ ಇದೇ ಸೆಪ್ಟೆಂಬರ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಕಲಬುರಗಿ ನಗರದ ಸರ್ಕಾರಿ (ಪುರುಷ) ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಸದರಿ ಮೇಳದಲ್ಲಿ ವಿವಿಧ ರಾಜ್ಯಗಳ ಪ್ರತಿಷ್ಟಿತ ಸುಮಾರು 15 ರಿಂದ 20 ತಾಂತ್ರಿಕ ಹಾಗೂ ತಾಂತ್ರಿಕೇತರ ಸೇವೆಗಳು, ಅಟೋಮೊಬೈಲ್ಸ್ ಪೈನಾನ್ಸ್, ರಿಟೇಲ್ ಇತರೆ ಸೇವೆಗಳಲ್ಲಿ ಹಲವಾರು ಕಂಪನಿಗಳು ಭಾಗವಹಿಸಲಿವೆ. 10ನೇ ತರಗತಿಯ ವಿದ್ಯಾರ್ಹತೆಯಿಂದ ವಿವಿಧ ವಿಷಯಗಳಲ್ಲಿ ಶೈಕ್ಷಣಿಕ ಪದವಿ ಪಡೆದ ಅರ್ಹತೆ ಹೊಂದಿದ ಉದ್ಯೋಗ ಆಕ್ಷಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬಹುದಾಗಿದೆ. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ., ಐಟಿಐ, ಪಿಯುಸಿ ಮತ್ತು ಯಾವುದೇ ಪದವಿ ಪಾಸಾಗಿರಬೇಕು.

ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಪ್ರಮಾಣಪತ್ರ, ಆಧಾರ್ ಕಾರ್ಡ್, ವೈಯಕ್ತಿಕ ಬಯೋಡಾಟಾದೊಂದಿಗೆ ಮೇಲ್ಕಂಡ ದಿನದಂದು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08472-225569, ಮೊಬೈಲ್ ಸಂಖ್ಯೆ 8317384664, 9538155569 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

7 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

7 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

9 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

9 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

9 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

9 hours ago