ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಭರ್ತಿ ಮಾಡಲು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರಕಾರಿ/ಅಂಗೀಕೃತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಸ್ಥಾನ ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸ್ಥಾನ ಮೀಸಲಿಡಲಾಗಿದೆ.
ಆಸಕ್ತವುಳ್ಳ ವಿದ್ಯಾರ್ಥಿಗಳು https://dom.karnataka.gov.in/kalaburagi/public ವೈಬ್‍ಸೈಟ್‍ದಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅವಶ್ಯಕ ದಾಖಲಾತಿಗಳೊಂದಿಗೆ ಆಳಂದ, ಅಫಜಲಪೂರ, ಜೇವರ್ಗಿ, ಸೇಡಂ, ಚಿತ್ತಾಪೂರ ಹಾಗೂ ಚಿಂಚೋಳಿ ತಾಲೂಕಿನಲ್ಲಿನ ಆಯಾ ತಾಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ 2021ರ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಕಲಬುರಗಿ ಹಾಗೂ ಅಫಜಲಪೂರ (ಮೊಬೈಲ್ ಸಂಖ್ಯೆ-7899755427), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಜೇವರ್ಗಿ-(9535775141), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಆಳಂದ-(8147775722), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಸೇಡಂ-(7892369798), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಚಿತ್ತಾಪೂರ-(9741168681) ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯಾಲಯ ಕಲಬುರಗಿ 08472-247260ಗಳಿಗೆ ಸಂಪರ್ಕಿಸಲು ಕೋರಲಾಗಿದೆ.