ಆಳಂದ: ರೈತರ ಸಾಲವನ್ನು ರೈತರಿಗೆ ನೀಡುವಲ್ಲಿ ಭ್ರಷ್ಟಾಚಾರ ಎಸಗಲಾಗುತ್ತಿದೆ ಎಂದು ಶಾಸಕ ಸುಭಾಷ್ ಆರ್ ಗುತ್ತೇದಾರ ಅವರು ವಿಧಾನಸಭೆಯಲ್ಲಿ ಸದನದ ಗಮನಕ್ಕೆ ತಂದರು.
ಬುಧುವಾರ ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕರು, ಕಲಬುರಗಿ ಜಿಲ್ಲೆಯಲ್ಲಿ ಹೊಸ ಸಾಲದ ನೆಪದಲ್ಲಿ ರೈತರಿಂದ ಹೆಚ್ಚಿನ ರೀತಿಯ ಹಣ ಕಡಿತ ಮಾಡಿಕೊಳ್ಳಲಾಗುತ್ತಿದೆ. ಮೊದಲೇ ಕೋವಿಡ್ ಇರುವುದರಿಂದ ರೈತರು ಎರಡು ವರ್ಷದಿಂದ ಸಂಕಷ್ಟದಲ್ಲಿದ್ದಾರೆ ಹೀಗಾಗಿ ಯಾವುದೇ ರೀತಿಯ ಹಣ ಕಡಿತ ಮಾಡದೇ ಸಂಪೂರ್ಣ ಸಾಲದ ಹಣವನ್ನು ರೈತರಿಗೆ ಕೊಡಬೇಕು ಮತ್ತು ಈಗಾಗಲೇ ರೈತರಿಂದ ಪಡೆದಿರುವ ಹೆಚ್ಚುವರಿ ಹಣದ ಬಗ್ಗೆ ತನಿಖೆಯಾಗಬೇಕು ಎಂದು ಸದನದ ಗಮನಕ್ಕೆ ತಂದರು.
ಮುಚ್ಚುವ ಸ್ಥಿತಿಯಲ್ಲಿದ್ದ ಬ್ಯಾಂಕಗೆ ಆರ್ಥಿಕ ಪುನಶ್ಚೇತನ ನೀಡಿದ ಶ್ರೇಯ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಸಲ್ಲುತ್ತದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹಾಗೂ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿಯಾಗಿ ಬ್ಯಾಂಕಿನ ಸ್ಥಿತಿಗತಿ ವಿವರಿಸಿ ಬ್ಯಾಂಕನ್ನು ಅಪಾಯದಿಂದ ಪಾರು ಮಾಡಿದ್ದೆವೆ. ಹಣ ಬಿಡುಗಡೆ ಮಾಡುವಾಗ ಪಕ್ಷವನ್ನು ನೋಡಿ ಹಣ ಬಿಡುಗಡೆ ಮಾಡಿಲ್ಲ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹಣ ಬಿಡುಗಡೆ ಮಾಡಲಾಗಿದೆ ಎಂದು ಸದನದಲ್ಲಿ ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…