ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ: ಸೊನ್ನ ಶ್ರೀಗಳು ಅಭಿಮತ

ಜೇವರ್ಗಿ: ಇಂದಿನ ವಿದ್ಯಾರ್ಥಿಗಳಿಗೆ ಯಾವುದೇ ಜಾತಿ-ಬೇಧವಿಲ್ಲದಿರುವಂತಹ. ಸೋಲು-ಗೆಲುವನ್ನು ಸಮಾನವಾಗಿ ಕಾಣುವಂತಹ ಮೌಲ್ಯಾಧಾರಿತ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಸೊನ್ನ ವಿರಕ್ತ ಮಠದ ಶ್ರೀ ಡಾ.ಶಿವಾನಂದ ಮಹಾಸ್ವಾಮಿಗಳು ನುಡಿದರು.

ಕಲ್ಯಾಣ ಕರ್ನಾಟಕೋತ್ಸವ ಅಂಗವಾಗಿ ಕಲಬುರಗಿಯ ವಿಶ್ವಜ್ಯೋತಿ ಪ್ರತಿಷ್ಠಾನವು ತಾಲೂಕಿನ ನೆಲೋಗಿಯ ಸರಕಾರಿ ಪ್ರೌಢ ಶಾಲಾ ಆವರಣದಲ್ಲಿ ಆಯೋಜಿಸಿದ ‘ಕಲ್ಯಾಣ ಶಿಕ್ಷಣ’ ವಿಶೇಷ ಅಭಿಯಾನದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದ ಅವರು, ಈ ನಿಟ್ಟಿನಲ್ಲಿ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಅವರು ತಮ್ಮ ಪ್ರತಿಷ್ಠಾನದ ನಿತ್ಯ ನೂತನ ಕಾರ್ಯಕ್ರಮಗಳಿಂದ ಸರ್ವ ಜನಾಂಗದ ಸೇವಕರೆನಿಸಿಕೊಂಡಿದ್ದು, ಹಾಗಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಕನ್ನಡ ಸಾರಸ್ವತ ಲೋಕದಲ್ಲಿ ಎತ್ತರದ ಸ್ಥಾನಕ್ಕೆ ಹೋಗಲಿ ಎಂದು ಹಾರೈಸಿದರು.

ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಪ್ರತಿಯೊಬ್ಬರ ಬದುಕಿನಲ್ಲಿ ಬೆಳಕನ್ನು ಮೂಡಿಸುವ ಕೆಲಸವನ್ನು ಶಿಕ್ಷಕರು ಮಾಡುತ್ತಿದ್ದಾರೆ. ಅವರ ಜೀವನ ಎಲ್ಲರಿಗೂ ಪ್ರೇರಣೆಯಾಗಿದೆ. ಸಮಾಜದ ಅಭಿವೃದ್ದಿಗೆ ಶಿಕ್ಷಕರ ಕೊಡುಗೆ ಅಪಾರವಾಗಿದ್ದು, ವಿದ್ಯಾರ್ಥಿಗಳಿಗೆ ಒಳ್ಳೆಯ ಸಲಹೆ, ಮಾರ್ಗದರ್ಶನ ನೀಡಿದರೆ ಸಮಾಜವನ್ನು ಮತ್ತಷ್ಟು ಪರಿವರ್ತನೆಯತ್ತ ಕೊಂಡೊಯ್ಯಬಹುದು ಎಂದು ಆಶಯ ವ್ಯಕ್ತಪಡಿಸಿದರು.
ಅಭಿಯಾನಕ್ಕೆ ಚಾಲನೆ ನೀಡಿದ ಗ್ರಾಪಂ ಅಧ್ಯಕ್ಷ ಬೈಲಪ್ಪ ನೇದಲಗಿ ನೆಲೋಗಿ, ಮಕ್ಕಳಿಗೆ ಹೆಚ್ಚಿನ ಅಂಕ ಗಳಿಸುವ ಶಿಕ್ಷಣಕ್ಕಿಂತ ಸಾಮಾಜಿಕ ಪ್ರಜ್ಞೆ ಮೂಡಿಸುವಂಥ ಮೌಲ್ಯಾಧಾರಿತ ಶಿಕ್ಷಣದ ಅವಶ್ಯಕತೆ ಇದೆ ಎಂದರು.

ಶಾಲೆಯ ಮುಖ್ಯೋಪಾಧ್ಯಾಯರಾದ ದೇವಿಂದ್ರಪ್ಪ ಗುಂಡಾಪುರ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ ಹೂಗಾರ ಉಪನ್ಯಾಸ ನೀಡಿದರು.

ಪಿಎಸೈ ರಾಜಕುಮಾರ ಜಾಮಗೊಂಡ, ಸಾಹಿತ್ಯ ಪ್ರೇರಕರಾದ ಭೀಮರಾವ ಗುಜಗೊಂಡ, ಶರಣಕುಮಾರ ಬಿಲ್ಲಾಡ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ವಿದ್ಯಾಧರ ಚೌಡಾಪುರ, ನಿಂಗಣ್ಣ ಅಂಬಿಗೇರ, ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಬಿರಾದಾರ, ಸಾಹಿತಿ ಸದಾನಂದ ಪಾಟೀಲ, ಪ್ರಮುಖರಾದ ಭೀಮಾಶಂಕರ ಕಾಚಾಪುರ, ಮಂಜುನಾಥ ಕಂಬಾಳಿಮಠ, ವಿಶ್ವನಾಥ ತೊಟ್ನಳ್ಳಿ. ಶರಣಕುಮಾರ ಹೊಸಮನಿ, ಭಗವಂತರಾಯ ಪಾಟೀಲ ಅಂಕಲಗಿ, ಆನಂದ ದೊಡ್ಡಮನಿ, ಬಾಬುಗೌಡ ಪಾಟೀಲ, ಸೋಮರಾಯ ಗುಜಗೊಂಡ, ಗುರು ಪಾಟೀಲ, ಅಣವೀರ ಹರವಾಳ, ಭಗವಂತರಾಯ ಚೌಡಾಪುರ, ಶ್ರೀಶೈಲ್ ಬಿರಾದಾರ, ಮಲ್ಲಿಕಾರ್ಜುನ ಬಂಗಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಶಿಕ್ಷಕ ವೃತ್ತಿಯ ಜತೆಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮಲ್ಲಿಕಾರ್ಜುನ ಬಂಗಾರಿ, ದೇವಪ್ಪ ಹಿಪ್ಪರಗಿ, ದೇವಿಂದ್ರಪ್ಪ ಗುಂಡಾಪುರ, ದೌಲತರಾಯ ಭಂಟನೂರ, ಶ್ರೀಶೈಲ ಬಿರಾದಾರ, ರಾಜೇಸಾಬ, ವಿಶ್ವನಾಥ ಮೇತ್ರಿ, ಮಲ್ಲಿನಾಥ ಹೂಗಾರ, ಮರೆಪ್ಪ ಮ್ಯಾಗೇರಿ, ತಿಪ್ಪಣ್ಣ ಪರೀಟ್, ಮಲ್ಲಿಕಾರ್ಜುನ ರೆಡ್ಡಿ, ಮಲ್ಲಿಕಾರ್ಜುನ ಕೊಟ್ರಗಸ್ತಿ, ಮಾಳಪ್ಪ ಆರ್.ಕಲ್ಲೂರ, ಕಸ್ತೂರಿ ಹರಿವಾಳ, ಅಂಬುಜಾ, ಹುಲಿಗೆಮ್ಮಾ, ಸವಿತಾ ಗಾಣಿಗೇರ ಅವರಿಗೆ ‘ಆದರ್ಶ ಶಿಕ್ಷಕ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago