ಹೈದರಾಬಾದ್ ಕರ್ನಾಟಕ

ಕನ್ನಡ ಸಾರಸ್ವ ಲೋಕಕ್ಕೆ ಲಿಂಗರಾಜ ಶಾಸ್ತ್ರಿ ಕೊಡುಗೆ ಅಪಾರ

ಕಲಬುರಗಿ : ಇತ್ತೀಚಿಗೆ ನಿಧನ ಹೊಂದಿದ ಶರಣಬಸವ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರಿ ಅವರಿಗೆ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಮಾತನಾಡಿ, ಡಾ.ಲಿಂಗರಾಜ ಶಾಸ್ತ್ರಿ ಅವರು ಒಬ್ಬ ಉತ್ತಮ ಸಾಹಿತಿ, ಬರವಣಿಗೆಗಾರ, ವಾಗ್ಮೀಯಾಗಿದ್ದರು. ಅವರು ಕನ್ನಡ ಸಾಹಿತ್ಯಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಕಳೆದ ಎರಡು ದಶಕಗಳಿಂದ ಸಾಹಿತ್ಯದ ಒಡನಾಟ ಹೊಂದಿದ್ದರು. ಅವರ ಈ ಅಕಾಲಿಕ ಮರಣದಿಂದ ಕನ್ನಡ ಸಾಹಿತ್ಯ ಲೋಕ ಬಡವಾಯಿಗಿದೆ. ಶರಣಬಸವ ವಿವಿಯ ಮೌಲ್ಯಮಾಪನ ಕುಲಸಚಿವರಾಗಿ ಸೇವೆಗೈಯುತ್ತ ಸಾಹಿತ್ಯದ ಅಭಿರುಚಿ ಹೊಂದಿದ್ದರು.

ಎಲ್ಲರೊಂದಿಗೆ ಸ್ನೇಹಜೀವಿಯಾಗಿದ್ದ ಶಾಸ್ತ್ರಿ ಅವರು ಉತ್ತಮ ಆಡಳಿತಗಾರರಾಗಿದ್ದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವಿವಿಧ ತಾಂತ್ರಿಕ ಮಹಾವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾಗಿ, ಪ್ರಾಚಾರ್ಯೆರಾಗಿ ಮತ್ತು ಶರಣಬಸವ ವಿಶ್ವವಿದ್ಯಾಲಯದಲ್ಲಿ ಮೌಲ್ಯಮಾಪನ ಕುಲಸಚಿವರಾಗಿ ಸಂಸ್ಥಾನದ ಅನೇಕ ಸಾಂಸ್ಕೃತಿಕ, ಧಾರ್ಮಿಕ ಸಮಾರಂಭಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದರು ಎಂದು ಸ್ಮರೀಸಿದರು.

ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಪುಟ್ಟಮಣಿ ದೇವಿದಾಸ, ಡಾ.ಸೀಮಾ ಪಾಟೀಲ, ಶ್ರೀಮತಿ ಜಾನಕಿ ಹೊಸೂರ, ಕೃಪಾಸಾಗರ ಗೊಬ್ಬುರ ಶಾಸ್ತ್ರಿ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಸಂಗೀತಾ ಪಾಟೀಲ, ಪದ್ಮಜಾ ವೀರಶೆಟ್ಟಿ, ದಾಕ್ಷಾಯಣಿ ಕಾಡಾದಿ, ಕಲ್ಪನಾ ಡಿ, ವೀರಭದ್ರಯ್ಯ ಸ್ಥಾವರಮಠ, ಬೋಧಕೇತ ಸಿಬ್ಬಂದಿ ವಿನೋದ ಹಳಕಟ್ಟಿ, ಅಪ್ಪಾಸಾಬ ಬಿರಾದಾರ, ಅನುಸೂಯ ಬಡಿಗೇರ, ಶಶಿಕಲಾ ಪಾರಾ, ಪ್ರಭಾವತಿ ಹೆಚ್. ಮತ್ತಿತರರು ಇದ್ದರು.

emedialine

Recent Posts

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

16 mins ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

19 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

30 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago