ಕಲಬುರ್ಗಿ : ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತತ್ವದ ಭಾವನೆಗಳನ್ನು ಎತ್ತಿ ಹಿಡಿದು ಅವುಗಳನ್ನು ಜೀವನದ ತತ್ವಗಳನ್ನಾಗಿ ಅಳವಡಿಸಿಕೊಂಡಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕಂಡ ನಿಜವಾದ ಸಾಮಾಜಿಕ ಪ್ರಜಾಪ್ರಭುತ್ವದ ಕನಸನ್ನು ನಾವೆಲ್ಲರೂ ನನಸಾಗಿಸಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ. ಎಚ್.ಟಿ ಪೋತೆ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫ್ಲಾಕ್ಷ್ ಮತ್ತು ಭಾರತದ ಸಂವಿಧಾನದ ಪ್ರೀಯಾಂಬಲ್ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರ ಜೀವನ ಚರಿತ್ರೆ ಹಾಗೂ ಅವರು ಸಾಗಿಸಿದ ಬದುಕು ಇಂದಿನ ಯುವಕರಿಗೆ ಪ್ರೇರಣೆಯಾಗಬೇಕು ಆ ದಿಸೆಯಲ್ಲಿ ಯುವ ಜನತೆ ಮಾಹಾತ್ಯಾಗ ಮೂರ್ತಿ ಅಂಬೇಡ್ಕರ್ ರವರ ಹಾದಿಯಲ್ಲಿ ಒಂದಿಷ್ಟು ದೂರ ಕ್ರಮಿಸಿದ್ದೇರೆ ದೇಶಕ್ಕೆ – ವಿಶ್ವಕ್ಕೆ ಉತ್ತಮ ಅಲ್ಲದೆ ನಾವೆಲ್ಲರೂ ಸಮೃದ್ಧವಾಗಿ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ಅಕ್ಷರಸ್ಥರೆ ಇವತ್ತು ಬುದ್ಧ, ಬಸವ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಮೋಸ ಮಾಡುತ್ತಿದ್ದೇವೆ. ಅವರ ಹಾಕಿ ಕೊಟ್ಟಿರುವ ಮಾರ್ಗದಲ್ಲಿ ಯಾರು ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮನುಸ್ಮೃತಿ ಬದಿಗಿಟ್ಟು ಅಂಬೇಡ್ಕರ್ ಸ್ಮೃತಿ ಆಧಾರದ ಮೇಲೆ ಆಡಳಿತ ಮತ್ತು ಜೀವನ ನಡೆಸುವ ಸಂಕಲ್ಪ ತೊಟ್ಟಾಗ ಮಾತ್ರ ದೇಶದಲ್ಲಿ ಒಗ್ಗಟ್ಟು ಮೂಡಲು ಸಾಧ್ಯ.ಅಂಬೇಡ್ಕರ್ ಸ್ಮೃತಿ ಎಂದರೆ ಭಾರತದ ಸಂವಿಧಾನ. ಇದು ಮಾನವೀಯ ಮೌಲ್ಯದಿಂದ ಕೂಡಿದೆ. ಸಮಾನತೆ, ಪ್ರಜಾತಂತ್ರ, ಒಕ್ಕೂಟ ವ್ಯವಸ್ಥೆಯಿದೆ. ಇದರ ಆಧಾರದ ಮೇಲೆ ನಮ್ಮ ಆಡಳಿತ ಮತ್ತು ಜೀವನ ಮಾರ್ಗ ಕಂಡುಕೊಳ್ಳುವುದರಿಂದ ಶೋಷಣೆ, ದಾರಿದ್ರ್ಯ, ಅಸಮಾನತೆ ಇತ್ಯಾದಿ ನಿವಾರಿಸಬಹುದು ಎಂದು ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ ಡಾ. ವಿ.ಟಿ ಕಾಂಬಳೆ ಮಾತನಾಡಿನಮ್ಮ ದೇಶವನ್ನು ಒಗ್ಗಟ್ಟಾಗಿ ಮುಂದುವರಿಸಲು ಇದಕ್ಕಿಂತ ಉತ್ತಮ ಮಾರ್ಗ ಬೇರೊಂದಿಲ್ಲ,ಅಂಬೇಡ್ಕರ್ ಅವರ ಚಿಂತನೆಗಳು, ವಿಚಾರಧಾರೆಗಳನ್ನು ಯುವ ಜನರಿಗೆ ಮುಟ್ಟಿಸುವ ದಿಸೆಯಲ್ಲಿ ಅವರು ಜೀವನ ಪ್ರಯೋಗ ಹೆಚ್ಚು ಪ್ರಭಾವಶಾಲಿ ಹಾಗೆ ಅಂಬೇಡ್ಕರ್ ರವರು ಜೀವಂತವಾಗಿಲ್ಲದಿದ್ದರೂ ಅವರ ವೈಚಾರಿಕ ಚಿಂತನೆಗಳು ಇನ್ನೂ ಜೀವಂತವಾಗಿ ಇವೇ ಅನ್ನುವದನ್ನು ಮರೆಯಬಾರದು.
ಹಾಗಾಗಿ ಅವರ ವಿಚಾರಗಳನ್ನು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳುವ ದಿಸೆಯಲ್ಲಿ ಹೆಜ್ಜೆ ಹಾಕುವುದು ಒಳ್ಳೆಯದು ಹಾಗೆ ನಾಡಿಗೆ – ದೇಶಕ್ಕೆ ಮಾದರಿಯಾಗುವ ಮೂಲಕ ಪ್ರೇರಣೆ ಕೆಲಸ ಮಾಡಿ,ಅಂಬೇಡ್ಕರ್ ರವರ ಗೌರವವನ್ನು ಜಾಗತಿಕ ಮಟ್ಟದಲ್ಲಿ ಮಿಂಚುವಂತೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ಅವರ ಆಶಯದಂತೆ ಬದುಕುವುದು ಕಲಿಯೊಣ ಎಂದು ಹೇಳಿದರು.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಸಂಯೋಜನಾಧಿಕಾರಿ ಡಾ. ಡಿ.ಬಿ ಪಾಟೀಲ್, ಡಾ. ವಿಜಯಕುಮಾರ ಗೋಪಾಳೆ, ಡಾ. ರಾಜಕುಮಾರ ದಣ್ಣೂರ, ಡಾ. ಅಮೀರ, ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…