ಬಿಸಿ ಬಿಸಿ ಸುದ್ದಿ

ಕಲಬುರಗಿ: ಸಿಡಿಲು ಬಡಿದು ರೈತ ಸಾವು

ಕಲಬುರಗಿ: ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ಗುರುವಾರದಂದು ಶಹಾಬಾದ ನಗರದ ಹೊರವಲಯದಲ್ಲಿರುವ ತೊನಸನಹಳ್ಳಿ(ಎಸ್) ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.

ರೈತ ಚಂದ್ರಕಾಂತ ಅಲ್ಲೂರ (28) ಮೃತಪಟ್ಟ ದುರ್ದೈವಿ. ಹೊಲದಲ್ಲಿ ಕೆಲಸದಲ್ಲಿ ನಿರತನಾಗಿದ್ದ ಸಮಯದಲ್ಲಿ ರಭಸವಾಗಿ ಸುರಿಯುತ್ತಿರುವ ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಆಶ್ರಯ ಪಡೆದಿದ್ದಾನೆ. ಆ ವೇಳೆಯಲ್ಲಿ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಹಾರಕ್ಕೆ ಶಾಸಕ ಮತ್ತಿಮಡು ಸೂಚನೆ: ಸಿಡಿಲಿನಿಂದ ರೈತನೊಬ್ಬ ಮೃತಪಟ್ಟಿದ್ದಾನೆ ಎಂದು ತಿಳಿದ ತಕ್ಷಣವೇ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ನಿರತರಾದರೂ ತಕ್ಷಣವೇ ತಹÀಸೀಲ್ದಾರ ಸುರೇಶ ವರ್ಮಾ ಅವರಿಗೆ ಕರೆ ಮಾಡಿ ಕೂಡಲೇ ಸಿಡಿಲಿನಿಂದ ಸಾವನಪ್ಪಿದ ರೈತನ ಕುಟುಂಬಕ್ಕೆ ಆದಷ್ಟು ಬೇಗನೆ ಪರಿಹಾರ ನೀಡುವತ್ತ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

8 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

8 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

10 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

10 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

10 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

10 hours ago