ಸುರಪುರ: ರಾಜ್ಯದಲ್ಲಿನ ಅಂಗನವಾಡಿ ನೌಕರರ ಮತ್ತು ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ನೌಕರರ ಸಂಘ ಮತ್ತು ಅಕ್ಷರದಾಸೋಹ ನೌಕರರ ಸಂಘದಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ, ಇಂಡಿಯನ್ ಲೇಬರ್ ಕಾನ್ಫರೆನ್ಸ್‌ನ ೪೫ನೇ ಮತ್ತು ೪೬ನೇ ಅಧಿವೇಶನದ ಶೀಫಾರಸ್ಸಿನಂತೆ ಸ್ಕೀಮು ಯೋಜನೆಯ ಕೆಲಸಗಾರರಿಗೆ ಕನಿಷ್ಠ ೨೧ ಸಾವಿರ ರೂಪಾಯಿಗಳ ಮಾಸಿಕ ವೇತನ ಹಾಗು ೧೦ ಸಾವಿರ ರೂಪಾಯಿಗಳ ಪಿಂಚಣಿ ನೀಡಬೇಕೆಂದರು.ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ,ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ,ಅಂಗನವಾಡಿ ವರ್ಕ್‌ರ‍್ಸ್ ಜನಶ್ರೀ ಭೀಮಾ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಬೇಕು ಎನ್ನುವುದು ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳ ಈಡೇರಿಸಲು ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಕಚೇರಿ ಸಿರಸ್ಥೆದಾರರ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಸಂಘಟನೆಯ ಅಧ್ಯಕ್ಷೆ ನಸೀಮಾ ಮುದನೂರು,ಅಕ್ಷರದಾಸೋಹ ನೌಕರರ ಸಂಘದ ಅಧ್ಯಕ್ಷೆ ಜಹಿರಾಬೇಗಂ,ರಾಧಾಬಾಯಿ ಲಕ್ಷ್ಮೀಪುರ,ಬಸ್ಸಮ್ಮ ಆಲ್ಹಾಳ,ಮಂಜುಳಾ ಸಂತ್ರಸವಾಡಿ,ಪರ್ವಿನ್ ಶರ್ಕಿಮೊಲ್ಲಾ,ಪ್ರಕಾಶ ಆಲ್ಹಾಳ,ಲಕ್ಷ್ಮೀ ವಡ್ಡರಕಾಲೋನಿ,ಸೌಭಾಗ್ಯ ಸೇರಿದಂತೆ ಅನೇಕರಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…