ಕಲಬುರಗಿ : ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದವತಿಯಿಂದ ೨೦೧೯-೨೦ನೇ ಸಾಲಿನ ಅಪ್ಪ ಪ್ರಶಸ್ತಿಯನ್ನು ಸಾರಂಗಮಠ ಶ್ರೀಶೈಲಂ ಹಾಗೂ ಸುಲಫಲ ಮಠ ಶಹಾಬಜಾರನ ಪೂಜ್ಯ ಶ್ರೀ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳಿಗೆ ನೀಡಿ ಗೌರವಿಸಲಾಯಿತು.
ಶುಕ್ರವಾರ ಸುಲಫಲಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಮನ್ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪಾ, ಕಾರ್ಯದರ್ಶಿ ಬಸವರಾಜ ದೇಶಮುಖ ಮತ್ತು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಹಾಗೂ ಅವರ ಸಿಬ್ಬಂದಿಯವರು ಪೂಜ್ಯ ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಆಶೀರ್ವಚನ ಮಾಡಿದ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪಾ ಅವರು ಮಾತನಾಡಿ ಪೂಜ್ಯರು ಸಾಮಾಜಿಕ, ಆಧ್ಯಾತ್ಮಿಕ, ಸಾಹಿತ್ಯಿಕ, ಸಾಂಸ್ಕೃತಿಕ ಶಕ್ತಿಯಾಗಿದ್ದಾರೆ. ಭಕ್ತಿ ಭಂಡಾರಿ ಬಸವಣ್ಣ ಮತ್ತು ದಾಸೋಹ ಭಂಡಾರಿ ಶರಣಬಸವರಲ್ಲಿ ಅಪಾರ ಭಕ್ತಿಯುಳ್ಳವರಾಗಿದ್ದಾರೆ. ಎಲ್ಲಾ ವರ್ಗದ ಜನರನ್ನು ಗೌರವಾದರಗಳಿಂದ ಕಾಣುತ್ತ, ಭಾತೃತ್ವ ಭಾವನೆ ಮೈಗೂಡಿಸಿಕೊಂಡಿದ್ದಾರೆ. ರಾಷ್ಟ್ರಿಯತೆ, ಸಾಮಾಜಿಕ ಐಕ್ಯತೆ, ಸ್ವತಂತ್ರ ವಿಚಾರ, ಕನ್ನಡ ನಾಡು ನುಡಿ ಪ್ರೇಮ, ಶಿಕ್ಷಣದ ಒಲವು, ಮಹಿಳೆಯರಿಗೆ ಗೌರವ ಮತ್ತು ಮಹಾನ ವಾಗ್ಮಿಗಳು, ತತ್ವಶಾಸ್ತ್ರ ಪ್ರವೀಣರು, ಮಹಾ ದಾರ್ಶನಿಕರು ಆಗಿರುವ ಪೂಜ್ಯರಿಗೆ ಅಪ್ಪ ಪ್ರಶಸ್ತಿಯನ್ನು ನೀಡುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿದ ಸಾರಂಗಧರ ಮ್‌ದೇಶಿಕೇಂದ್ರ ಮಹಾಸ್ವಾಮಿಗಳು ಮಾತನಾಡಿ, ಶರಣಬಸವೇಶ್ವರರು, ಪೂಜ್ಯ ದೊಡ್ಡಪ್ಪ ಅಪ್ಪನವರು ಹಾಗೂ ಪೂಜ್ಯ ಡಾ.ಶರಣಬಸವಪ್ಪ ಅಪ್ಪನವರ ಆಶೀರ್ವಾದ ತಮ್ಮ ಮೇಲೆ ತಮ್ಮ ಮಠದ ಮೇಲೆ ಸದಾ ಇದೆ. ಪ್ರಶಸ್ತಿ ನೀಡಿರುವುದಕ್ಕೆ ತಮಗೆ ಬಹಳ ಸಂತೋಷವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸಪ್ಪ ಹೀರಾ, ಡಾ.ಶಿವರಾಜ ಶಾಸ್ತ್ರಿ ಹೇರೂರ್, ಡಾ.ಎಮ್.ಆರ್. -, ನ್ಚಿ’ಪ್ಙ್ಝಿ -ನ್ಙ್ಝಿ , ಅನೇಕ ಭಕ್ತರು ಹಾಗೂ ಗೋದುತಾಯಿ ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಡಾ.ಪುಟ್ಟಮಣಿ ದೇವಿದಾಸ ನಿರೂಪಿಸಿದರು, ಶ್ರೀಮತಿ ಜಾನಕಿ ಹೊಸುರ ಸ್ವಾಗತ ಮತ್ತು ಪ್ರಾಸ್ತಾವಿಕ ಮಾತನಾಡಿದರು, ಕೃಪಾಸಾಗರ ಗೊಬ್ಬುರ ಸನ್ಮಾನ ಪತ್ರ ಓದಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…