ಚಿಂಚೋಳಿ: ವಿಧಾನಸಭಾ ಮತಕ್ಷೇತ್ರದ ಶಾಸಕರ KKRDB ಅನುದಾನದಲ್ಲಿ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಸುಮಾರು 30 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಪೈಪ್ಲೈನ್ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದೆ ಎಂದು ಗ್ರಾಮದ ಪರಿವರ್ತನ ಫೌಂಡೇಶನ್ ಅಧ್ಯಕ್ಷರಾದ ಶೇಖರ್ ಕಂಠಿ ಹಾಗೂ ಮುಖಂಡರಾದ ವಿಶಾಲ್ ಹಂದ್ರೊಳ್ಳಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಮದಲ್ಲಿ ಈ ಕಾಮಗಾರಿಗಳು ಪೂರ್ತಿ ಕಳಪೆ ಮಟ್ಟದಿಂದ ಕೂಡಿದ್ದು, ಸದರಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಹಾಗೂ ಕಾಮಗಾರಿಯನ್ನು ಸಂಪೂರ್ಣ ವಿಫಲವಾಗಿದ್ದು ಇನ್ನೊಮ್ಮೆ ದುರಸ್ತಿ ಕಾರ್ಯ ಕೈಗೊಳ್ಳಿಸಿ ಗ್ರಾಮದ ಜನರಿಗೆ ಅನುಕೂಲ ಮಾಡಿಕೊಂಡಬೇಕೆಂದು ಎಂದು ಮನವಿ ಮಾಡಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದುರಸ್ತಿ ಮಾಡದಿದ್ದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.