ಬಿಸಿ ಬಿಸಿ ಸುದ್ದಿ

ಭಾರತ ಬಂದ್ ಬೆಂಬಲಿಸಿದ ಎಸ್ ಯುಸಿಐ ಕಮ್ಯುನಿಸ್ಟ್ ಪಕ್ಷ

ವಾಡಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ ಯುಸಿಐ) ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಹಾಗೂ ರೈತ ಕೃಷಿ ಕಾರ್ಮಿಕ ಸಂಘಟನೆ (ಆರ್ ಕೆಎಸ್) ಪದಾಧಿಕಾರಿಗಳು ಶನಿವಾರ ಭಾರತ್ ಬಂದ್ ಹೋರಾಟದ ಪ್ರಚಾರ ಕೈಗೊಂಡರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಜೀಪ್ ಜಾಥಾ ಉದ್ಘಾಟಿಸಿ ಮಾತನಾಡಿದ ಎಸ್ ಯುಸಿಐ ಕಾರ್ಯದರ್ಶಿ ಕಾಮ್ರೇಡ್ ಆರ್.ಕೆ.ವೀರಭದ್ರಪ್ಪ, ಮೂರು ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗಿರುವ ಕೇಂದ್ರ ಬಿಜೆಪಿ ಸರಕಾರ ದೇಶದ ರೈತರನ್ನು ಬೀದಿಪಾಲು ಮಾಡಲು ಸಿದ್ದತೆ ಮಾಡಿಕೊಂಡಿದೆ. ಉಳುವ ನೇಗಿಲ ಯೋಗಿಗಳನ್ನು ಕೃಷಿ ಭೂಮಿಯಿಂದ ಒಕ್ಕಲೆಬ್ಬಿಸಿ ಕಾರ್ಪೋರೇಟ್ ಕಂಪನಿಗಳ ಗುಲಾಮರನ್ನಾಗಿಸಲು ಪ್ರದಾನಿ ನರೇಂದ್ರ ಮೋದಿ ಯವರು ಹೊಸ ಕುಣಿಕೆ ಹೆಣೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಆಡಳಿತ ಶುರುವಾದಂದಿನಿಂದ ದೇಶದ ಬಡಜನರ ಬದುಕು ಬೆಲೆ ಏರಿಕೆಯ ಬಿಸಿಯಲ್ಲಿ ಕುದಿಯುತ್ತಿದೆ. ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಏರಿಕೆ, ಅನಿಲ ಬೆಲೆ ಹಾಗೂ ಇತರ ಅಗತ್ಯ ವಸ್ತುಗಳ ದರ ಗಗನಕ್ಕೇರಿ ಜನಸಾಮಾನ್ಯರ ಜೀವನ ಕಂಗೆಟ್ಟಿದೆ. ಬಡವ ಬದುಕು ಅಸಹನೀಯವಾಗಿದೆ. ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು, ಕಾರ್ಮಿಕರು ತೀವ್ರ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.

ಕಳೆದ 11 ತಿಂಗಳಿಂದ ರೈತರು ದೇಹಲಿಯಲ್ಲಿ ಹೋರಾಟ ನಡೆದಿದೆ ಸುತ್ತಿದ್ದರೂ ಕಿವುಡ ಮೋದಿ ಸರಕಾರಕ್ಕೆ ಅನ್ನದಾತರ ಅಳಲು ಕೇಳುತ್ತಿಲ್ಲ. ಮಾಧ್ಯಮಗಳೂ ಕೂಡ ಕಣ್ಣು ಮುಚ್ಚಿಕೊಂಡಿವೆ. ರೈತರು ಉಳಿದರೆ ಮಾತ್ರ ಅನ್ನ ಉಳಿಯುತ್ತದೆ ಎಂಬುದನ್ನು ಬಂಡವಾಳಶಾಹಿ ಶೋಷಕ ಸರಕಾರ ಬಿಜೆಪಿಗೆ ಅರ್ಥವಾಗುತ್ತಿಲ್ಲ. ರೈತರ ಪರವಾಗಿ ನಿಲ್ಲಬೇಕಾದ ಬಿಜೆಪಿ ಸರಕಾರ ಪೊಲೀಸರ ಮೂಲಕ ಹೋರಾಟ ನಿರತ ರೈತರ ಮೇಲೆ ಗುಂಡಿನ ದಾಳಿ ನಡೆಸಿದೆ.

ಲಾಠಿ ಏಟಿನಿಂದ ರೈತರ ಬೆನ್ನಿಗೆ ಗಾಯ ಮಾಡಿದೆ. ಇದು ರೈತಪರ ಸರಕಾರವಲ್ಲ ಎಂದು ವಾಗ್ದಾಳಿ ನಡೆಸಿದ ವೀರಭದ್ರಪ್ಪ, ಸೆಪ್ಟೆಂಬರ್ 27 ರಂದು ಕರೆ ನೀಡಲಾಗಿರುವ ಭಾರತ ಬಂದ್ ಹೋರಾಟವನ್ನು ಬೆಂಬಲಿಸುವ ಮೂಲಕ ಜನರು ನಾವು ರೈತಪರ ಎಂಬುದನ್ನು ಸಾಭೀತುಪಡಿಸಬೇಕು. ಆಮೂಲಕ ಮೋದಿ ಅಹಂಕಾರಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಮನವಿ ಮಾಡಿದರು.

ಆರ್ ಕೆ ಎಸ್ ರೈತ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಗುಂಡಣ್ಣ ಎಂ.ಕೆ, ಮುಖಂಡರಾದ ಶರಣು ಹೇರೂರ, ಗೌತಮ ಪರತೂರಕರ, ವೆಂಕಟೇಶ್ ದೇವದುರ್ಗ, ವಿಠ್ಠಲ ರಾಠೋಡ, ಗೋವಿಂದ ಯಾಳವಾರ, ರಾಜು ಒಡೆಯರ, ಯೆಸಪ್ಪಾ ಕೇದಾರ, ಶ್ರೀಶೈಲ ಕೆಂಚಗುಂಡಿ, ಅರೂಣ ಹಿರೆಬಾನರ, ಅವಿನಾಶ್ ಒಡೆಯರ್ ಜೀಪ್ ಜಾಥಾದಲ್ಲಿ ಪಾಲ್ಗೊಂಡಿದ್ದರು.

ರಾವೂರ, ಇಂಗಳಗಿ, ವಾಡಿ, ಕುಂದನೂರ, ಹಳಕರ್ಟಿ, ಬಳವಡಗಿ, ಕೊಂಚೂರ, ನಾಲವಾರ, ಕೊಲ್ಲೂರ, ಲಾಡ್ಲಾಪುರ, ಅಣ್ಣಿಕೇರಾ ಗ್ರಾಮಗಳು ಸೇರಿದಂತೆ ಚಿತ್ತಾಪುರ ತಾಲೂಕಿನಾಧ್ಯಂತ ಭಾರತ ಬಂದ್ ಪ್ರಚಾರ ಯಶಶ್ವಿಯಾಗಿ ನಡೆಯಿತು. ಈ ನಡುವೆ ಗ್ರಾಮದ ರೈತರು ಹೋರಾಟಗಾರರಿಗೆ ಧನ ಸಹಾಯ ನೀಡಿ ಚಳಿವಳಿಯನ್ನು ಬೆಂಬಲಿಸಿದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

26 mins ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

11 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

11 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

13 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

13 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago