ಆಳಂದ: ಪಟ್ಟಣದಲ್ಲಿ ಅಂಚೆ ಇಲಾಖೆಯ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ಮಂಜೂರಾತಿ ಕೈಗೊಳ್ಳಬೇಕು ಎಂದು ಸ್ಥಳೀಯ ಅಂಚೆ ಇಲಾಖೆಯ ಸಿಬ್ಬಂದಿಗಳ ಪರವಾಗಿ ನಾಗರಿಕರು ಒತ್ತಾಯಿಸಿದರು.
ಪಟ್ಟಣದಲ್ಲಿ ಶನಿವಾರ ಆಗಮಿಸಿದ್ದ ಕೇಂದ್ರ ಸರ್ಕಾರದ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವ ಭಗವಂತ ಖೂಬಾ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಪಟ್ಟಣದ ಹೃದಯ ಅಂಚೆ ಇಲಾಖೆಗೆ ಸ್ವಂತ ಜಾಗವಿದ್ದು, ಕಟ್ಟಡ ಇರುವಿಲ್ಲದೆ ಬಾಡಿಗೆ ಕಟ್ಟಡದಲ್ಲಿಕಾರ್ಯ ನಿರ್ವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಮಂತ್ರಿಗಳಾದ ತಾವು ಅನುದಾನ ಒದಗಿಸಲು ಶ್ರಮಿಸಬೇಕು. ಸದ್ಯ ಪುರಸಭೆ ಮಳಿಗೆ ಮೇಲಂತಸ್ತಿನಲ್ಲಿ ಬಾಡಿಗೆಯಲ್ಲಿ ಅಂಚೆ ಕಚೇರಿ ಕಾರ್ಯನಿರ್ವಹಿಸುತ್ತಿದ್ದು, ವಯಸ್ಕರರಿಗೆ ಕಚೇರಿ ಕೆಲಸಕ್ಕೆ ಮೇಲೆತ್ತಿ ಬರಲು ತೊಂದರೆ ಆಗುತ್ತಿದೆ ಎಂದು ೨೫ಕ್ಕೂ ಹೆಚ್ಚು ನಾಗರಿಕರು ಸಹಿ ಹಾಕಿದ ಮನವಿ ಸಲ್ಲಿಸಿದರು.
ವಿಮಾ ದೊರಕಿಸಲು ಮನವಿ: ಅತಿವೃಷ್ಟಿಯಿಂದ ಹಾನಿಯಾದ ಬೆಳೆಗೆ ಎಲ್ಲಾ ರೈತರಿಗೆ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಅಡಿಯಲ್ಲಿ ವಿಮಾ ಮೊತ್ತವನ್ನು ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಘಟಕವು ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಮನವಿ ಸಲ್ಲಿಸಿ ಇದೇ ವೇಳೆ ಒತ್ತಾಯಿಸಿದರು. ಸೋಬಾಭಿನ್ ಮತ್ತು ತೊಗರಿಗೆ ಕ್ವಿಂಟಲ್‌ಗೆ ೮ ಸಾವಿರ ರೂ.ಗಳಂತೆ ಖರೀದಿಸಬೇಕು. ಕೇಂದ್ರ ಸರ್ಕಾರದ ೫೦ ಕೋಟಿ ಅನುದಾನ ನೀಡಿ ೧೫ರಿಂದ ೨೦ ಸಣ್ಣ ಕೆರೆಗಳನ್ನು ನಿರ್ಮಿಸಿ ರೈತರಿಗೆ ಅನುಕೂಲ ಒದಗಿಸಬೇಕು. ೨೪ ಗಂಟೆ ವಿದ್ಯುತ್ ಸೇರಿ ನೀರಾವರಿ ಕಲ್ಪಿಸಿ ಬರಮುಕ್ತ ತಾಲೂಕನ್ನಾಗಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿನಾಥ ಪಾಟೀಲ ಕಾಳಗಿ, ಹಿರಿಯ ರೈತ ಮುಖಂಡ ಆಧಿನಾಥ ಹೀರಾ, ಶ್ರೀಶೈಲ ಪಾಟೀಲ, ಶಿವುಕುಮಾರ ಜಂಬಗಾ, ಮಲ್ಲಣ್ಣಾ ಕುಲಕರ್ಣಿ ಮತ್ತಿತರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…