ಕಲಬುರಗಿ: ನಗರದ ಶ್ರೀ ಶರಣಬಸವೇಶ್ವರ ಕೆರೆ ಸೌಂದರ್ಯಿಕರಣ ಕಾಮಗಾರಿಯನ್ನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಸಿ ಪಾಟೀಲ ರೇವೂರ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಂಡು ಶೀಘ್ರವಾಗಿ ಪೂರ್ಣಗೊಳಿಸಲು ಸೂಚಿಸಿದರು.