ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ವಿವಿಧ ರಸ್ತೆಗಳಿಗೆ ಅಲಂಕಾರಿಕ ಎಲ್.ಇ.ಡಿ ದೀಪಗಳನ್ನು ಅಳವಡಿಸುವ ಯೋಜನೆಗಳಿಗೆ ಹಿಂದಿ ಪ್ರಚಾರ ಸಭಾ ಹತ್ತಿರ ಶಾಸಕರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ದಕ್ಷಿಣ ಮತಕ್ಷೇತ್ರ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಕಳೆದ ೧೪ ನೇ ಹಣಕಾಸು ಯೋಜನೆಯಡಿಯಲ್ಲಿ ನಗರದ ಜಗತ್ ವೃತ್ತದಿಂದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದವರಿಗೆ ೮೦ ಲಕ್ಷ ರೂಪಾಯಿ ವೆಚ್ಚದ ಯೋಜನೆ ಹಾಗೂ ಅನ್ನಪೂರ್ಣ ವೃತ್ತದಿಂದ ಬಿಲಗುಂದಿ ವೃತ್ತದ (ಖರ್ಗೆ ಪೆಟ್ರೋಲ್ ಬಂಕ್) ವರೆಗಿನ ೧೧೮ ಲಕ್ಷ ರೂಪಾಯಿ ವೆಚ್ಚದ ಯೋಜನೆಗಳು ಸೇರಿ ಒಟ್ಟು ೨ ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸುವ ಯೋಜನೆಗೆ ಅವರು ಭೂಮಿ ಪೂಜೆ ಮಾಡಿದರು.
ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಬೇರೆ ಜಿಲ್ಲೆಯಂತೆ ಕಲಬುರಗಿ ನಗರದಲ್ಲಿಯೂ ಸಹ ಅಲಂಕಾರಿಕ ದೀಪಗಳನ್ನು ಅಳವಡಿಸುವ ಮೂಲಕ ನಗರವನ್ನು ಸ್ಮಾರ್ಟ್ ಸಿಟಿ ಮಾಡುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಶ್ರಮಿಸಬೇಕು. ಮುಂದಿನ ದಿನಗಳಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಗುಣಮಟ್ಟದ ಎಲ್.ಇ.ಡಿ ದೀಪಗಳನ್ನು ಅಳವಡಿಸುವ ಮೂಲಕ ನಗರವನ್ನು ಬೆಳಕಿನಿಂದ ಕಂಗೊಳಿಸುವಂತೆ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.
ಈಗಾಗಲೇ ೧೫ ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಗೊಂಡಿದ್ದು, ನಗರದ ವಿವಿಧ ರಸ್ತೆಗಳಲ್ಲಿ ದೀಪ ಅಳವಡಿಸಲು ೬೦ ಕೋಟಿ ರೂಪಾಯಿ ಗಳ ಟೆಂಡರ್ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಕಲಬುರಗಿ ನಗರ ಸೋಡಿಯಂ ಬಲ್ಬ್ ಗಳ ಬದಲಿಗೆ ಎಲ್.ಇ.ಡಿ ಬಲ್ಬ್ ಗಳನ್ನು ಅಳವಡಿಸಲಾಗುವುದು. ಇದರಿಂದ ಜೆಸ್ಕಾಂ ಸಂಸ್ಥೆಗೆ ವಿದ್ಯುತ್ ಹೊರೆಯೂ ಕಡಿಮೆ ಯಾಗಲಿದೆ ಎಂದು ದತ್ತಾತ್ರೇಯ ಪಾಟೀಲ್ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ನೂತನ ಸದಸ್ಯರಾದ ವಿಶಾಲ್ ದರ್ಗಿ, ವೀರಣ್ಣ ಹೊನ್ನಳಿ, ಮಹಾನಗರ ಪಾಲಿಕೆಯ ಅಧೀಕ್ಷಕ ಅಭಿಯಂತರರಾದ ಆರ್. ಆರ್. ಜಾಧವ, ಮುಖಂಡರಾದ ಮಹೇಶ ರೆಡ್ಡಿ, ಅಣವೀರ ಪಾಟೀಲ, ಪೀರಶಟ್ಟಿ ಸೋಮಾ, ಪ್ರದೀಪ ಹಾಗೂ ಅಧಿಕಾರಿಗಳು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…