ಬಿಸಿ ಬಿಸಿ ಸುದ್ದಿ

ಪ್ರವಾಸಿಗಳಿಗೆ ಪ್ರವಾಸಿ ತಾಣಗಳ ಸ್ಪಷ್ಟ ಮಾಹಿತಿ ನೀಡಲಿ : ಸಂಜೀವಕುಮಾರ ಕಾಂಬಳೆ

ಕಲಬುರಗಿ ಜಿಲ್ಲೆಯು ಐತಿಹಾಸಿಕ ಸೌಹಾರ್ದತೆಯ ನಗರವಾಗಿದೆ. ಕಲಬುರಗಿ ನಗರದಲ್ಲಿ ಐತಿಹಾಸಿಕ ಸ್ಮಾರಕಗಳು ದೇವಸ್ಥಾನಗಳು  ವಿಹಾರಗಳು, ಜೀನಾಲಯಗಳು ಮಾನವಿತೆಯಿಂದ ಪ್ರತಿಬಿಂಬವಾಗಿವೆ. ಇಂತಹ ಸ್ಥಳಗಳು ಪ್ರವಾಸಿ ಕೇಂದ್ರಗಳನ್ನಾಗಿ ಮಾಡಲು  ವಿಶ್ವ ಪ್ರವಾಸೋದ್ಯಮ ದಿನಾಚರಣೆ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ಭಾಗದಲ್ಲಿರುವ ಪ್ರವಾಸಿ ತಾಣಗಳ ಪ್ರಚಾರ ಪ್ರಸಾರ ಕಾರ್ಯವನ್ನು ಮಾಡಿ ಸ್ವದೇಶಿ-ವಿದೇಶಿ ಪ್ರವಾಸಿಗರಿಗೆ ಪ್ರವಾಸಿ ಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕೆಂದು ಸುಂದರ ರಾಷ್ಟ್ರಾಭಿವೃದ್ಧಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಂಜೀವಕುಮಾರ ಕಾಂಬಳೆ ಆಗ್ರಹಿಸಿದ್ದಾರೆ.

ಕಲ್ಯಾಣ ಕರ್ನಾಟಕ ವಿಭಾಗದ ಕೇಂದ್ರ ಸ್ಥಳ ಕಲಬುರಗಿಯು ೫ ವಿಶ್ವವಿದ್ಯಾಲಯಗಳು, ವೈದ್ಯಕೀಯ ಕಾಲೇಜುಗಳು ತಾಂತ್ರಿಕ ಕಾಲೇಜುಗಳು ಶೈಕ್ಷಣಿಕ ಕೇಂದ್ರವಾಗಿದೆ. ಸಾವಿರಾರು ಶಿಕ್ಷಕರ ತರಬೇತಿ ಪಡೆಯುವ ಪ್ರಶಿಕ್ಷಣಾರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯ ಸಹಾಯಾನುದಾನ ಅಡಿಯಲ್ಲಿ ಕ್ರಿಯಾ ಯೋಜನೆ ರೂಪಿಸಿ ’ದೇಶ ಸುತ್ತು ಕೋಶ ಓದು’ ಎಂಬಂತೆ ಈ ಭಾಗದ ಸ್ಥಳಗಳ ಕುರಿತು ಮಾರ್ಗದರ್ಶನ ಅರಿವು ಮೂಡಿಸಬೇಕೆಂದು ಸುಂದರ ರಾಷ್ಟ್ರಾಭಿವೃದ್ಧಿ ಸಂಸ್ಥೆಯು ಮಾನ್ಯ ಜಿಲ್ಲಾಧಿಕಾರಿಗಳಿಗೆ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿಕೊಳ್ಳುತ್ತೇವೆ.

ಜಿಲ್ಲಾ ಪ್ರವಾಸೋದ್ಯಮ ಇಲಾಖೆ ’ಒಂದು ರಾಜ್ಯ, ಹಲವು ಜಗತ್ತು’ ಟ್ಯಾಗ್‌ಲೈನನ ಮೂಲಕ ಸುಸ್ಥಿರ ಹಾಗೂ ಅಂತರಗತ ಬೆಳವಣಿಗೆಗೆ ಪ್ರವಾಸೋದ್ಯಮ- ಬೆಳಕಿಗೆ ಬಾರದ ಪ್ರವಾಸಿ ತಾಣಗಳು ೨೦೨೧ರ ಇಡೀ ವರ್ಷ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶಾಲಾ-ಕಾಲೇಜು ಮಕ್ಕಳಿಗೆ ತಿಳಿಸಿ.

ಮಾನ್ಯ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಇರುವ ಸಂಘ ಸಂಸ್ಥೆ ವೇದಿಕೆಗಳಿಗೆ ಸಮಾಲೋಚನೆ ಸಭೆ ಕರೆದು ಜಿಲ್ಲೆಯ ಪ್ರವಾಸೋದ್ಯಮದ ಕುಂದು ಕೊರತೆ ಬಗ್ಗೆ ಮನವಿ ಸ್ವೀಕರಿಸಿ ಈ ಭಾಗದ ನಿರುದ್ಯೋಗಿಗಳಿಗೆ ಇಲಾಖೆಯ ಸಹಾಯ ಅನುದಾನ, ತರಬೇತಿ, ಮಾರ್ಗದರ್ಶನ ನೀಡಿ, ಬ್ಯಾಂಕ್‌ಗಳ ಮೂಲಕ ಸದರಿ ಸಂಘ ಸಂಸ್ಥೆಗಳಿಗೆ ಕಾರ ಟ್ಯಾಕ್ಸಿ ಇಲಾಖೆಯ ಸೌಲಭ್ಯಗಳು ನೀಡುವ ಅವಕಾಶ ಮಾಡಿಕೊಡಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಸುಂದರ ರಾಷ್ಟ್ರಾಭಿವೃದ್ಧಿ ಸಂಸ್ಥೆ ಮನವಿ ಮಾಡಿಕೊಳ್ಳುತ್ತದೆ.

emedialine

View Comments

  • ನಿಮ್ಮದು ಒಳ್ಳೆಯ ಅಭಿಪ್ರಾಯ ಸರ್ 👍🏻

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

38 mins ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

12 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

23 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

23 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago