ಬಿಸಿ ಬಿಸಿ ಸುದ್ದಿ

ಲೂಟಿಕೋರ ಕಾಯ್ದೆಗಳನ್ನು ವಾಪಸ್ ಪಡೆಯಲು ಆಗ್ರಹ

ಕಲಬುರಗಿ: ಲೂಟಿಕೋರ ಕಾರ್ಪೊರೇಟ್ ಕಂಪೆನಿಗಳ ಪರವಾದ ಕಾಯ್ದೆಗಳನ್ನು ವಾಪಸ್ ಪಡೆದು ರೈತರು, ಸಾರ್ವಜನಿಕರ ಹಿತ ಕಾಪಾಡುವಂತೆ ಆಗ್ರಹಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಲೂಟಿಕೋರ ಕಾರ್ಪೊರೇಟ್ ಕಂಪೆನಿಗಳ ಒತ್ತಡಕ್ಕೆ ಮಣಿದು ಲೂಟಿ ಪರವಾದ ಜಾಗತೀಕರಣ ಉದಾರೀಕರಣ ಮತ್ತು ಖಾಸಗೀಕರಣ ನೀತಿಗಳನ್ನು ಜಾರಿಗೊಳಿಸುರುವುದು ಖಂಡನಾರ್ಹವಾಗಿದೆ. ರಾಜಕೀಯ ಪಕ್ಷಗಳ ಜೊತೆ ಚರ್ಚಿಸದೇ ತರಾತುರಿಯಲ್ಲಿ ಅಧಿವೇಶನದ ಕೊನೆಯ ಹಂತದಲ್ಲಿ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಅಂಗೀಕರಿಸಿದೆ. ಭೂ ಸುಧಾರಣೆ ಕಾಯ್ದೆ ೨೦೨೦ ಪರಂಪರೆಯಿಂದ ರೈತರ ವಶದಲ್ಲಿದ್ದು ಉದ್ಯೋಗ ಭದ್ರತೆಯನ್ನು ಒದಗಿಸುತಿದ್ದ ಕೃಷಿ ಭೂಮಿಯನ್ನು ಬಲವಂತವಾಗಿ ಕಾರ್ಪೊರೇಟ್ ಕಂಪೆನಿಗಳ ಕೃಷಿಕರಲ್ಲದ ಶ್ರೀಮಂತರ ಕೈಗೆ ವರ್ಗಾಯಿಸಿ ಬಡವರಿಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.

ಕೃಷಿ ಉತ್ಪನ್ನಗಳ ಬೆಲೆಗಳನ್ನು ಇಳಿಸಿ ರೈತರನ್ನು ಲೂಟಿ ಮಾಡಲಾಗುತ್ತಿದೆ. ವರ್ತಕರು ಮತ್ತು ಕಾರ್ಪೊರೇಟ್ ಕಂಪೆನಿಗಳಿಗೆ ನೆರವಾಗುವ ರೀತಿಯಲ್ಲಿ ಕೇಂದ್ರ ಸರಕಾರ ವ್ಯವಸ್ಥಿತ ಸಂಚು ರೂಪಿಸುತ್ತಿದೆ ಎಂದು ಆಪಾದಿಸಿದರು.

ಕೂಡಲೇ ರಾಜ್ಯ ಸರಕಾರ ವಿಧಾನಸಭೆ ಅಧಿವೇಶನದಲ್ಲಿ ಸಂವಿಧಾನ ಹಾಗೂ ಜನವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಲು ಮತ್ತು ಅವುಗಳ ಜಾರಿಯನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರಯೀ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಎಸ್.ಸರಡಗಿ, ಉಪಾಧ್ಯಕ್ಷ ಶರಣು ಆರ್ ಕಟ್ಟಿಮನಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಪುಷ್ಪಾವತಿ ಗೊಬ್ಬೂರ, ಕಾರ್ಯಕರ್ತರಾದ ಮಲ್ಲಮ್ಮ ಪತ್ರಿ, ಭವಾನಿ ಕೆ.ಆರ್, ಶಿವಲೀಲಾ ದಂಡೋತಿ, ವಿಜಯಲಕ್ಷ್ಮಿ ಭಂಡಾರಿ, ನೀಲಮ್ಮ ಡೋನೂರ್, ಸಿಂಗೋಠಿ ಶಹಾಪುರ ಇದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

8 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

19 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

19 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

21 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

21 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

21 hours ago