ಶಹಾಬಾದ: ರೈತ ವಿರೋಧಿ ಮೂರು ಕರಾಳ ಕಾಯ್ದೆಗಳನ್ನು ಹಿಮ್ಮೆಟಿಸಲು ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಕರೆ ನೀಡಿದ ಭಾರತ್ ಬಂದ್ಗೆ ನಗರದಲ್ಲಿ ಯಾವುದೇ ಪ್ರತಿಕ್ರಿಯೆ ಕಂಡು ಬರಲಿಲ್ಲ. ಎಂದಿನಂತೆ ವ್ಯಾಪಾರ ವಹಿವಾಟು ನಡೆದಿರುವುದು ಕಂಡು ಬಂದಿತು.
ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಕರೆ ನೀಡಿದ ಭಾರತ್ ಬಂದ್ಗೆ ರೈತ-ಕೃಷಿ ಕಾರ್ಮಿಕ ಸಂಘಟನೆ ಹಾಗೂ ಎಸ್ಯುಸಿಐ (ಕಮ್ಯೂನಿಷ್ಟ್) ಪಕ್ಷದವರು ಸಾಕಷ್ಟು ಬಾರಿ ಭಾರತ ಬಂದ್ ಹೋರಾಟದ ಪ್ರಚಾರ ಕೈಗೊಂಡಿದ್ದರು.
ಇನ್ನೆನೋ ಸೋಮವಾರ ಎಲ್ಲಾ ಬಂದ್ ಆಗಲಿವೆ ಎಂದು ತಿಳಿದುಕೊಂಡ ಜನರಿಗೆ ಸೋಮವಾರ ಯಾವುದೇ ರೀತಿಯ ಬಂದ್ ವಾತಾವರಣ ಕಂಡು ಬರಲಿಲ್ಲ. ನಗರದಲ್ಲಿ ಜನಜೀವನ ಎಂದಿನಂತೆ ಇದೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಾಹನ ಸಂಚಾರ ಸರಾಗವಾಗಿತ್ತು.
ಬ್ಯಾಂಕುಗಳು ಶಾಲಾ-ಕಾಲೇಜುಗಳು ಹಾಗೂ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಸರಳವಾಗಿ ಯಾವುದೇ ಅಡೆತಡೆಯಿಲ್ಲದೇ ಕಾರ್ಯನಿರ್ವಹಿಸಿದವು. ಈಲ್ಲಾ ಮಟ್ಟದಲ್ಲಿಯೇ ದೊಡ್ಡ ಮಟ್ಟದಲ್ಲಿ ಭಾರತ್ ಬಂದ್ಗೆ ಹೋರಾಟ ರೂಪಿಸಿದ್ದರಿಂದ ಎಲ್ಲರೂ ಅಲ್ಲಿಗೆ ಬರುವಂತೆ ಕರೆ ನೀಡಿದ್ದರಿಂದ ಸ್ಥಳೀಯ ಹೋರಾಟ ಸಮಿತಿಗಳು, ಸಂಘದವರು ಜಿಲ್ಲಾ ಕಲಬುರಗಿ ನಗರಕ್ಕೆ ಹೋಗಿದ್ದರು.ನಗರದಲ್ಲಿ ಯಾವುದೇ ಹೋರಾಟ ನಡೆಯಲಿಲ್ಲ. ಇವೆಲ್ಲದರ ಪರಿಣಾಮ ಭಾರತ್ ಬಂದ್ ನಗರದವರ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲಿಲ್ಲ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…