ಬೆಂಗಳೂರು: ಕರೋನಾ ಸಾಂಕ್ರಾಮಿಕ ರೋಗದ ಹೊಡೆತಕ್ಕೆ ಎಲ್ಲಾ ಕ್ಷೇತ್ರಗಳು ನಲುಗಿ ಹೋಗಿವೆ. ಅದರಲ್ಲೂ ಹಲವಾರು ಕ್ಷೇತ್ರಗಳಲ್ಲಿ ಸಂಸ್ಥೆಗಳು ಬಾಗಿಲು ಮುಚ್ಚಿದ್ದು, ಸಾವಿರಾರು ಜನರು ಉದ್ಯೋಗವಂಚಿತರಾಗಿದ್ದಾರೆ.
ಈ ಉದ್ಯೋಗವಂಚಿತರಿಗೆ ತಮ್ಮ ಸ್ವಂತ ಉದ್ಯೋಗ ಪ್ರಾರಂಭಿಸಲು ಹೆಚ್ಚಿನ ಕೌಶಲ್ಯದ ಅಗತ್ಯವನ್ನು ಮನಗೊಂಡಿರುವ ಮಾಜಿ ಸಚಿವರಾದ ಕೆ.ಜೆ ಜಾರ್ಜ್ ಅವರು ತಮ್ಮ ಕ್ಷೇತ್ರ ಸರ್ವಜ್ಞನಗರದಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರವನ್ನು ಸ್ಥಾಪಿಸಿದ್ದು, ಸಾವಿರಾರು ಜನ ಯುವಕರಿಗೆ ತರಬೇತಿ ನೀಡುವ ವ್ಯವಸ್ಥೆಯನ್ನು ಮಾಡಿದ್ದಾರೆ.
ಯುವಕರು ಹಾಗೂ ನಮ್ಮ ನಗರದ ಕಾರ್ಮಿಕ ವರ್ಗದವರಿಗೆ ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವುದರಿಂದ ಅವರ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ. ಅಲ್ಲದೆ, ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಅನುಕೂಲವಾಗುತ್ತವೆ. ಕರೋನಾ ನಂತರದ ಬದಲಾವಣೆಗಳಲ್ಲಿ ಹಲವಾರು ಜನರು ಪ್ರಾಥಮಿಕವಾಗಿ ತಮ್ಮ ಜೀವನಕ್ಕೆ ಅವಲಂಬಿತರಾಗಿದ್ದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಹಾಗೆಯೇ, ಹೊಸ ಉದ್ಯೋಗಕ್ಕೆ ಅವರಿಗಿದ್ದ ಕೌಶಲ್ಯಗಳಲ್ಲಿ ಕೊರತೆ ಉಂಟಾಗುವುದನ್ನು ನಾವು ಗಮನಿಸಿದೆವು. ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರಗಳನ್ನು ಪ್ರಾರಂಭಿಸಲು ನಿರ್ಧರಿಸಿ ಅದರಲ್ಲಿ ಸಫಲರಾಗಿದ್ದೇವೆ ಎಂದು ಮಾಜಿ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.
ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿಯಲ್ಲಿ ಮತ್ತೊಂದು ಕೌಶಲ್ಯಾಭಿದ್ದಿ ಕೇಂದ್ರವನ್ನು ಸ್ಥಾಪಿಸಿದ್ದೇವೆ. ಕೌಶಲ್ಯಾಭಿವೃದ್ದಿ ತರಬೇತಿ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿರುವ ಡಾನ್ ಬಾಸ್ಕೋ ಟೆಕ್ ಸೋಸೈಟಿ ಸಂಯುಕ್ತಾಶ್ರಯದಲ್ಲಿ, ಈ ಕೌಶಲ್ಯಾಭಿವೃದ್ದಿ ಕೇಂದ್ರದಲ್ಲಿ ರೆಫ್ರೆಜರೇಶನ್ ಮತ್ತು ಏರ್ ಕಂಡೀಷನರ್ ತಾಂತ್ರಿಕ ತರಬೇತಿ, ಎಲೆಕ್ಟ್ರಕಿಕ್ ಟೆಕ್ನೀಶಿಯನ್ ತರಬೇತಿ ಹಾಗೂ ಕಂಪ್ಯೂಟರ್ ತರಬೇತಿಯ ಕೋರ್ಸ್‌ಗಳನ್ನು ಪ್ರಾರಂಭಿಸಿದ್ದೇವೆ. ತರಬೇತಿಯ ನಂತರ ಅವರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ ಎಂದು ಕೆ.ಜೆ. ಜಾರ್ಜ್ ಹೇಳಿದರು.
ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 18 ಸರಕಾರಿ ಶಾಲೆಗಳು ಹಾಗೂ 38 ಅಂಗನವಾಡಿ ಕೇಂದ್ರಗಳನ್ನು ತಮ್ಮ ಸಿಎಸ್‌ಆರ್ ನಿಧಿಯಿಂದ ಫುಲ್ ಹೈಟೆಕ್ ಮಾಡಿದ್ದಾರೆ. ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಅಳವಡಿಸಿದ್ದು, ಆಂಡ್ರಾಯ್ಡಿ ಟಿವಿಗಳು, ಇಂಟರ್‌ನೆಟ್ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಇಲ್ಲಿ ಅಳವಡಿಸಲಾಗಿದೆ.
ಅಂಗನವಾಡಿಗಳ ಚಿತ್ರಣವೇ ಬದಲು:
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 38 ಅಂಗನವಾಡಿ ಕೇಂದ್ರಗಳು ಯಾವುದೇ ಖಾಸಗಿ ಪ್ಲೇಹೋಂಗಳಿಗೂ ಕಮ್ಮಿಯಿಲ್ಲದಂತೆ ರೂಪಿಸಲಾಗಿದೆ. ಅತ್ಯಾಧುನಿಕ ಆಟದ ಸಾಮಗ್ರಿಗಳು, ಪಾಠ ಕಲಿಕೆಯ ವಸ್ತುಗಳನ್ನು ಇಲ್ಲಿ ಕಾಣಬಹುದಾಗಿದೆ.
ಮೊದಲ ಬ್ಯಾಚ್ ನ 90 ಜನ ವಿದ್ಯಾರ್ಥಿಗಳಿಂದ ಈಗಾಗಲೇ ಈ ಕೇಂದ್ರ ತನ್ನ ಕಾರ್ಯವನ್ನು ಪ್ರಾರಂಭಿಸಿದೆ. ಮಾನ್ಯ ಕೌಶಲ್ಯಾಭಿವೃದ್ದಿ ಸಚಿವರಾದ ಡಾ ಅಶ್ವಥ್ ನಾರಾಯಣ ಅವರಿಂದ ಸೆಪ್ಟೆಂಬರ್ 30 ರಂದು ಈ ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆಯಾಗಲಿದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…