ನೂತನ ಶಿಕ್ಷಣ ನೀತಿ ಖಂಡಿಸಿ 1ರಂದು ಸಾಂಕೇತಿಕ ಧರಣಿ: ಅರ್ಜುನ್ ಭದ್ರೆ

ಕಲಬುರಗಿ: ದೇಶಾದ್ಯಂತ ಜಾರಿಗೊಳಿಸುತ್ತಿರುವ 2020ರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಕ್ಟೋಬರ್ 1 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಧರಣಿ ಕೈಗೊಳ್ಳಲಾಗುವುದು ಎಂದು ಸಮಿತಿಯ ರಾಜ್ಯ ಸಂಚಾಲಕ ಅರ್ಜುನ್ ಭದ್ರೆ ಅವರು ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರವು ನೂತನ ಶಿಕ್ಷಣ ನೀತಿ ಜಾರಿಗೆ ತಂದು ದೇಶದಲ್ಲಿ ಕೇಸರಿಕರಣ ಮಾಡಲು ಹೊರಟಿರುವುದಲ್ಲದೆ, ಸಂಪೂರ್ಣವಾಗಿ ಕಾರ್ಪೊರೇಟ್ ರ ಪರವಾಗಿ ಪೂರಕ ಅಂಶಗಳನ್ನು ಸೃಷ್ಟಿಸಿ ಶಿಕ್ಷಣವನ್ನು ವ್ಯಾಪಾರವನ್ನಾಗಿ ಪರಿವರ್ತಿಸಲು ಹುನ್ನಾರ ನಡೆಸುತ್ತಿರುವುದು ಖಂಡನೀಯ ಎಂದರು.

ಈ ಹೊಸ ಶಿಕ್ಷಣ ನೀತಿಯಿಂದ ಸಮಾನತೆ, ಸಾಮಾಜಿಕ ನ್ಯಾಯ ಸೇರಿದಂತೆ ಸ್ವಾತಂತ್ರ್ಯದ ಹಕ್ಕು ಪ್ರತಿಪಾದಿಸುವಂತಹ ಹಲವು ಅಂಶಗಳು ಇದರಲ್ಲಿ ಕಂಡು ಬರುತ್ತಿಲ್ಲ, ಕೇವಲ ವ್ಯಾಪಾರೀಕರಣಕ್ಕೆ ಮಾತ್ರ ಈ ನೀತಿ ಸೀಮಿತವಾಗಿದೆ ವಿನಃ ಬಡವರ್ಗದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಅರ್ಜುನ್ ಭದ್ರೆ ಅವರು ಆರೋಪಿಸಿದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾದಪೂರ್, ಶಿವಕುಮಾರ್ ಕೊರಳ್ಳಿ ಸೇರಿದಂತೆ ಮತ್ತಿತರರು ಇದ್ದರು.

emedialine

Recent Posts

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

3 mins ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

7 mins ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

1 hour ago

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

11 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

20 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420