ಕಲಬುರಗಿ: ಬಹುಜನ ಸಮಾಜ ಪಕ್ಷದಿಂದ ಸೆ.೩೦ರಂದು ೧೦.೩೦ಕ್ಕೆ ನಗರದ ಕೋಸಗಿ ಕಲ್ಯಾಣ ಮಂಟಪದಲ್ಲಿ ಬಹುಜನರ ನಡಿಗೆ ಅಧಿಕಾರ ಕಡೆಗೆ ಎನ್ನುವ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಕೆ.ಬಿ.ವಾಸು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾದೇವ ಧನ್ನಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಯನ್ನು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾರ್ಯಕರ್ತರ ಸಂಘಟನೆ ಕುರಿತು, ಹಾಗೂ ಮುಂಬರುವ ತಾಪಂ. ಜಿಪಂ ಎಲೆಕ್ಷನ್ ಕುರಿತು ಸಮಾವೇಶದಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗುವುದು. ಬೂತ್ ಮಟ್ಟದಿಂದ ಡೊಡ್ಡ ಮಟ್ಟದ ವರೆಗೆ ಕಾರ್ಯಕರ್ತರ ಪಡೆ ತಯಾರಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸಭಾ ಸದಸ್ಯ ರಾಮ್ ಗೌತಮ, ರಾಜ್ಯ ಉಸ್ತುವಾರಿಗಾಳಾದ ಮಾರಸಂದ್ರ ಮುನಿಯಪ್ಪ, ಸುರೇಂದ್ರ ಸಿಂಗ್ ಕಲೋರಿಯಾ, ಎಂ.ಗೋಪಿನಾಥ್, ದಿನೇಶ್ ಗೌತಮ, ರಾಜ್ಯ ಅಧ್ಯಕ್ಷ ಎಂ.ಕೃಷ್ಣಮೂರ್ತಿ, ರಾಜ್ಯ ಕಾರ್ಯದರ್ಶಿ ಸೂರ್ಯಕಾಂತ ನಿಂಬಾಳ್ಕರ್, ಜಿಲ್ಲಾ ಸಂಯೋಜಕರಾದ ಕೆ.ಪ್ರಕಾಶ, ಮೈಲಾರಿ ಸೇರಿದಂತೆ ಸಮಾವೇಶದಲ್ಲಿ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಎಲ್.ಆರ್.ಬೋಸ್ಲೆ, ಕೆ.ಪ್ರಕಾಶ, ಜೈಭೀಮ ಸಿಂಧೆ, ಶರಣಬಸಪ್ಪ ಸುಗೂರ, ಗೋರಕನಾಥ ದೊಡ್ಡಮನಿ, ಪ್ರಕಾಶ ಸಾಗರ್ ಇತರರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…