ಕಲಬುರಗಿ: ಜಿಲ್ಲೆಯಲ್ಲಿರುವ ಬಾಲ ಕಾರ್ಮಿಕ ಮಕ್ಕಳನ್ನು ವಿಶೇಷ ಸರ್ವೇ ಕ್ಯಾಂಪೆನ್ ಗಳ ಮೂಲಕ ಪತ್ತೆ ಹಚ್ಚಲು ಅಪರ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ ಅವರು ಅಧಿಕಾರಿಗಳಿಗೆ ಸೂಚಿನೆ ನೀಡಿದರು.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಸಲಹಾ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ತಾಲೂಕ ಮಟ್ಟದಲ್ಲಿ ಅಧಿಕಾರಿಗಳು ಸಕ್ರಿಯವಾಗಿ ಹಾಗೂ ಕ್ರಿಯಾಶೀಲರಾಗಿ ಬಾಲ ಕಾರ್ಮಿಕ ಮಕ್ಕಳ ಪತ್ತೆಗಾಗಿ ಕಾರ್ಯನಿರ್ವಾಹಿಸಬೇಕು. ಇದಲ್ಲದೆ ವೇಳಾಪಟ್ಟಿ ರೂಪಿಸಿಕೊಂಡು ತಹಸೀಲ್ದಾರ್ ಹಾಗೂ ಲೇಬರ್ ಅಧಿಕಾರಿಗಳ ಸಮ್ಮುಖದಲ್ಲಿ ದಿಢೀರ್ ದಾಳಿ ಮಾಡಿ ಬಾಲ ಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಿ ಎಂದು ಅವರು ನಿರ್ದೇಶನ ನೀಡಿದರು.
ಸರಿಯಾದ ಯೋಜನೆ ಹಾಗೂ ಸರಿಯಾದ ಸರ್ವೇ ಮುಖಾಂತರ ಮಾತ್ರ ಬಾಲ ಕಾರ್ಮಿಕ ಮಕ್ಕಳನ್ನು ವಶಪಡಿಸಿಕೊಳ್ಳಲು ಸಾಧ್ಯ. ವಶಪಡಿಸಿಕೊಂಡ ನಂತರ ಅವರನ್ನು ಬಾಲ ಮಂದಿರದಲ್ಲಿ ಪುನರ್ವಸತಿ ಕೇಂದ್ರದಲ್ಲಿ ದಾಖಲು ಮಾಡಿಕೊಂಡು ಮಕ್ಕಳಿಗೆ ಬಾಲ ಕಾರ್ಮಿಕ ಪದ್ಧತಿ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಅವರು ತಿಳಿಸಿದರು.
ಇದೆ ವೇಳೆ ಮಾತನಾಡಿದ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿ ಅವಿನಾಶ ನಾಯ್ಕ ಅವರು ಮಾತನಾಡಿ, ಜಿಲ್ಲೆಯ 11 ತಾಲೂಕಗಳ 32 ಹೋಬಳಿಗಳಲ್ಲಿ ಬಾಲ ಕಾರ್ಮಿಕ ಮಕ್ಕಳ ಪತ್ತೆಗೆ ಈಗಾಗಲೇ 2020-21 ರಲ್ಲಿ 3 ಲಕ್ಷ 23 ಸಾವಿರ ಹಾಗೂ 2021-22 ರಲ್ಲಿ 1 ಮತ್ತು 2 ಕಂತಿನಲ್ಲಿ 1 ಲಕ್ಷ 70 ಸಾವಿರ ಅನುದಾನ ಬಿಡುಗಡೆಯಾಗಿದೆ. ಕೋವಿಡ್ ಹಿನ್ನೆಲೆ ಯಾವುದೇ ತಪಾಸಣೆಯನ್ನು ಮಾಡಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ಸಹ ಬಾಲ ಕಾರ್ಮಿಕ ಮಕ್ಕಳ ಪತ್ತೆ ಕಾರ್ಯ ಶುರುವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ. ಯಲ್ಲಾಲಿಂಗ ಕಾಳನೂರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಲೀಡ್ ಬ್ಯಾಂಕನ ಮ್ಯಾನೇಜರ್ ಇಂತೆಸಾರ್ ಹುಸೇನ್ ಸೇರಿ ಸೊಸೈಟಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…
ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…
ಶಹಾಬಾದ: ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಬಿಜೆಪಿ…
ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್ ಕ್ಷೇತ್ರೀಯ ಕಾರ್ಯಾಲಯದಲ್ಲಿ ಮಂಗಳವಾರ 69ನೇ ಕನ್ನಡ ರಾಜ್ಯೋತ್ಸವವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಯಾಣ…
ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ…