ಕಲಬುರಗಿ: ಜಿಲ್ಲೆಯಲ್ಲಿರುವ ಎಲ್ಲಾ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಒದಗಿಸಿಕೊಡುವಂತೆ ಜೈ ಕನ್ನಡಿಗರ ಸೇನೆಯ ವತಿಯಿಂದ ಹಿಂದುಳಿದ ವರ್ಗಗಳ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿಯನ್ನು ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಭಾಸಗಿ ಅವರ ನೇತೃತ್ವದಲ್ಲಿ ಸಲ್ಲಿಸಲಾಯಿತು.
ಜಿಲ್ಲೆಯಲ್ಲಿರುವ ಯಾವೊಂದು ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಶೌಚಾಲಯ, ಹಾಸಿಗೆ ಹೊದಿಕೆ, ಬೆಡ್ಗಳು, ಪೌಷ್ಠಿಕ ಆಹಾರ, ವಿದ್ಯುತ್ ಸೇರಿದಂತೆ ಇನ್ನಿತರ ಯಾವುದೇ ಸೌಲಭ್ಯಗಳು ದೊರೆಯದೆ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ ಎಂದರು.
ಅಲ್ಲದೇ ಕೆಲವೊಂದು ವಸತಿನಿಲಯಗಳಲ್ಲಿ ರಾತಿ ಕಾವಲುಗಾರ ಕೂಡ ಇರುವುದಿಲ್ಲ ಇದರಿಂದ ಕೊಲವೊಂದು ಸೂಕ್ಷ್ಮ ಬಡಾವಣೆಯ ವಸತಿ ನಿಲಯಗಳಲ್ಲಿ ಹೊರಗಿನಿಂದ ಬೇರೆ ಜನ ಬಂದು ಅಲ್ಲಿರುವ ವಿದ್ಯಾರ್ಥಿಗಳಿಗೆ ಹೆದರಿಸುವುದು ಬೆದರಿಸುವುದು ಕೂಡಾ ಮಾಡಿರುವುದು ಕಂಡು ಬಂರುತ್ತಿದೆ, ಆದ್ದರಿಂದ ನಮ್ಮ ಮನವಿಗೆ ಆದಷ್ಟು ಶೀಘ್ರದಲ್ಲಿಯೇ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕೆಂದು ಜೈ ಕನ್ನಡಿಗರ ಸೇನೆಯ ವತಿಯಿಂದ ಮನವಿ ಮಾಡಲಾಯಿತು ಎಂದು ದತ್ತು ಭಾಸಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಗನ್ನಾಥ ಸೂರ್ಯವಂಶಿ, ಶೇಷಗಿರಿ ಮರತೂರಕರ್, ಚೇತನ ಸಾಂಗ್ರೇಕರ್, ಸಂಜೀವಕುಮಾರ ಮಾಳಗೆ, ಪ್ರಶಾಂತ ಬಾಪೂನಗರ ವಿಶ್ವ ಬಾಪುನಗರ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…