ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಗೆ ಮನವಿ

0
18

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಲ್ಪ ಸಂಖ್ಯಾತ ಸಮುದಾಯದವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ ಆಳಂದ ತಾಲ್ಲೂಕಿನಲ್ಲಿ ಉರ್ದು ಮದರಸಾ ಶಾಲೆ ಕಟ್ಟಿಕೊಡಬೇಕು, ಶಾದಿ ಭಾಗ್ಯ ಅರ್ಜಿ ಸಲ್ಲಿಸಿದವರಿಗೆ ಕೂಡಲೇ ಹಣ ಜಮಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸಬೇಕು ಎಂದು ಕಲ್ಯಾಣ ಕರ್ನಾಟಕ ತೆಹರಿಕ್-ಇ-ಖುದದಾದ್ ಅಧ್ಯಕ್ಷ ಮಹ್ಮದ್ ರಫೀಕ್ ಮುಲ್ಲಾ ಅವರು ನಗರಕ್ಕೆ ಆಗಮಿಸಿದ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here