ಬಿಸಿ ಬಿಸಿ ಸುದ್ದಿ

ಶಹಾಬಾದನಲ್ಲಿ ೧೦.೧೨ ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಅಡಿಗಲ್ಲು

ಶಹಾಬಾದ: ಸುಮಾರು ಇಪ್ಪತೈದು ವರ್ಷಗಳಿಂದ ಹಾಳು ಬಿದ್ದ ಇಎಸ್‌ಐ ಆಸ್ಪತ್ರೆಯನ್ನು ಗುರತಿಸಿ ನವೀಕರಿಸಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಅವರು ಬುಧವಾರ ನಗರದ ಸಿದ್ದರಾಮೇಶ್ವರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ೨೦೧೮-೨೦೧೯ನೇಯ ಸಾಲಿನ ಪ್ರಗತಿ ಕಾಲೋನಿ ಅಡಿಯಲ್ಲಿ ಕಲ್ಬುರ್ಗಿ ಜಿಲ್ಲೆ ಶಹಾಬಾದ ನಗರ ವ್ಯಾಪ್ತಿಯಲ್ಲಿ ಬರುವ ಪರಿಶಿ? ಜಾತಿ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನಾ ಸಮಾರಂಭವನ್ನು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಸಂಪೂರ್ಣ ಕಾಮಗಾರಿ ಕೈಗೊಂಡಿದ್ದು, ಆಸ್ಪತ್ರೆಯ ಪಕ್ಕದಲ್ಲಿರುವ ವಸತಿ ಗೃಹಗಳ ನಿರ್ಮಾಣಕ್ಕೆ ಸುಮಾರು ೩ ಕೋಟಿ ಅನುದಾನ ಒದಗಿಸಲಾಗಿದೆ.ಅದನ್ನು ಪೂರ್ಣಗೊಳಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆಯಿಸಿ ಉದ್ಘಾಟನೆ ಮಾಡಲು ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರಿಗೆ ತಿಳಿಸಿದ್ದೆನೆ. ಅವರು ಕೂಡ ಒಪ್ಪಿದ್ದಾರೆ ಎಂದರು.

ಈಗಾಗಲೇ ನಗರದ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ನೀಡುವ ನಿಟ್ಟಿನಲ್ಲಿ ವಿವಿಧ ಯೋಜನೆಯಡಿ ಸುಮಾರು ೧೦.೧೨ ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಕೈಗೊಳ್ಳಲಾಗಿದ್ದು, ಅದರಲ್ಲಿ ಕೆಲವೊಂದು ಅಡಿಗಲ್ಲು ಹಾಗೂ ಉದ್ಘಾಟನೆ ಮಾಡಲಾಗಿದೆ.
ಭೋವಿ ಸಮಾಜದ ಸಮುದಾಯ ಭವನಕ್ಕೆ ಪೂಜೆ ಸಲ್ಲಿಸಲಾಗಿದೆ.ಅಲ್ಲದೇ ನಗರದ ಮುಖ್ಯ ಹಳ್ಳದ ಹೂಳನ್ನು ತೆಗೆಯಲು ೧.೩೦ ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಅದಕ್ಕೂ ಪೂಜೆ ನೇರವೇರಿಸಲಾಗಿದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಲಾಗಿದೆ. ನಗರದಲ್ಲಿ ಸಾರ್ವಜನಿಕರ ಬೇಡಿಕೆ ಮೇರೆಗೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ.ಈ ಹಿಂದೆ ಸ್ಥಗಿತಗೊಂಡ ಕಾಮಗಾರಿಗಳನ್ನು ಆದಷ್ಟು ಬೇಗನೆ ಮುಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದೆನೆ. ನಗರಸಭೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಐದು ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದರು.

ಶಹಾಬಾದ ಹೊಸ ತಾಲೂಕಾವಾಗಿದ್ದರಿಂದ ತಾಲೂಕಾ ಕಚೇರಿಗಳು ಪ್ರಾರಂಭ ಮಾಡುವ ನಿಟ್ಟಿನಲ್ಲಿಯೂ ಸಚಿವರೊಂದಿಗೆ ಮಾತನಾಡಿದ್ದೆನೆ. ಮುಂಬರುವ ದಿನಗಳಲ್ಲಿ ಕಚೇರಿಗಳನ್ನು ಪ್ರಾರಂಭ ಮಾಡಿ ನಗರದಲ್ಲಿಯೇ ಸಾರ್ವಜನಿಕರ ಕೆಲಸವಾಗುವಂತೆ ಮಾಡಲಾಗುವುದು.ಅಲ್ಲದೇ ನಗರದ ಕಾರ್ಖಾನೆ ಮುಚ್ಚಲ್ಪಟ್ಟಿದ್ದು, ಇದರಿಂದ ಇಲ್ಲಿನ ಕಾರ್ಮಿಕರಿಗೆ ಎಲ್ಲಿಲ್ಲದ ತೊಂದರೆಯಾಗಿದೆ. ಸಚಿವರಾದ ನಿರಾಣಿ ಅವರ ಜತೆ ಮಾತನಾಡಿ ಕಾರ್ಖಾನೆ ಪ್ರಾರಂಭ ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ ಎಂದರು.

ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಭೋವಿ ಸಮಾಜದ ಅಧ್ಯಕ್ಷ ಭೀಮರಾವ ಸಾಳುಂಕೆ, ವಾಡಿ-ಶಹಾಬಾದ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕನಕಪ್ಪ ದಂಡಗುಲಕರ್ ಮಾತನಾಡಿದರು. ತಹಸೀಲ್ದಾರ ಸುರೇಶ ವರ್ಮಾ,ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಖ ಅಭಿಯಂತರ ಕೃಷ್ಣ ಅಗ್ನಿಹೋತ್ರಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಣ್ಣಪ್ಪ ಕುದುರೆ,ನಗರಸಬೆಯ ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ಕಲಬುರಗಿಯ ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸೂಗೂರ, ಸೇಡಂ ಉಪಕೃಷಿ ನಿರ್ದೇಶಕ ಸಮ್ಮದ್ ಪಟೇಲ್, ಚಿತ್ತಾಪೂರ ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ, ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ಕೃಷಿ ಅಧಿಕಾರಿ ಕಾಶಿನಾಥ ದಂಡೋತಿ, ಲೋಕೋಪಯೋಗಿ ಇಲಾಖೆಯ ಎಇ ಜಗನ್ನಾಥ, ಮುಖಂಡರಾದ ನಾಗರಾಜ ಮೇಲಗಿರಿ, ಅನೀಲ ಭೋರಗಾಂವಕರ್, ನಿಂಗಣ್ಣ ಹುಳಗೋಳಕರ್, ಬಸವರಾಜ ಮದ್ರಕಿ ಸೇರಿದಂತೆ ನಗರಸಭೆಯ ಸದಸ್ಯರು ಹಾಜರಿದ್ದರು.

ರಘುನಾಥ ನರಸಾಳೆ ನಿರೂಪಿಸಿದರು, ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಸ್ವಾಗತಿಸಿದರು, ಮುತ್ತಣ್ಣ ಭಂಡಾರಿ ವಂದಿಸಿದರು.

ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ನನಗೆ ಸುಮಾರು ೨ ಲಕ್ಷಕ್ಕಿಂತಲೂ ಹೆಚ್ಚು ಹಣ ಸಹಾಯ ಮಾಡಿ ನನ್ನನ್ನು ಬದುಕಿಸಿದ್ದಾರೆ.ಅವರಿಗೆ ನಾನು ಎಂದಿಗೂ ಚಿರಋಣಿ ಎಂದು ಭಾವುಕದಿಂದ ನುಡಿದ ಮಂಜುಳಾ ಸಾಳುಂಕೆ ಎಂಬ ಮಹಿಳೆ ಕಾರ್ಯಕ್ರಮದ ಮಧ್ಯದಲ್ಲಿ ವೇದಿಕೆ ಹತ್ತಲಾಗದಿದ್ದುದನ್ನು ಕಂಡು ಕೆಳಗಡೆ ಬಂದಾಗ ಶಾಸಕರನ್ನು ಸನ್ಮಾನಿಸಿ ಮಾತನಾಡಿದರು.

emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

9 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

9 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

9 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

20 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

20 hours ago