ಬೀದರ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ( ಎಸ್ಎಫ್ಐ ) ಬೀದರ್ ಜಿಲ್ಲಾ ಸಮಿತಿಯ ವತಿಯಿಂದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಬೀದರ್ ನಲ್ಲಿ ಭೇಟಿಯಾಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳಿಲ್ಲ ಆದ್ದರಿಂದ ಹೆಚ್ಚುವರಿ ಹಾಸ್ಟೆಲ್ ಗಳನ್ನು ಮಂಜೂರು ಮಾಡಿಸಬೇಕು ಮತ್ತು ಬೀದರ್ ಜಿಲ್ಲೆ ಸೇರಿ ರಾಜ್ಯವ್ಯಾಪಿ ಓದುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವು ಸಮರ್ಪಕವಾಗಿ ಬಂದಿರುವುದಿಲ್ಲ ಇದರಲ್ಲಿ ವಿಶೇಷವಾಗಿ ಬಿಎಡ್, ಬಿಪಿಎಡ್, ಎಂಎಸ್ ಡಬ್ಲ್ಯೂ, ನರ್ಸಿಂಗ್, ಲಾ ಸೇರಿ ಇತರ ಕೋರ್ಸ್‌ಗಳನ್ನು ವಿದ್ಯಾರ್ಥಿ ವೇತನದ ಸರ್ಕಾರಿ ಕೋಟಾದ ಅಡಿಯಲ್ಲೆ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಮತ್ತು ಕಲಿಕೆಗೆ ತೊಂದರೆ ಉಂಟಾಗುತ್ತಿದೆ ಎಂದು ಎಸ್ಎಫ್ಐ ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಎಂದರು.
ವಿದ್ಯಾರ್ಥಿ ವೇತನ ಬರದ ಕಾರಣಕ್ಕಾಗಿ ಕೆಲವು ಖಾಸಗಿ ಕಾಲೇಜುಗಳು ವಿದ್ಯಾರ್ಥಿಗಳನ್ನು ಪರೀಕ್ಷೆ ಮತ್ತು ತರಗತಿಗೆ ಸೇರಿಕೊಳ್ಳಲು ನಿರಾಕರಣೆ ಮಾಡುತ್ತಿವೆ ಆದ್ದರಿಂದ ಕೂಡಲೇ ಬಾಕಿ ಇರುವ ಎಲ್ಲಾ ಹಂತದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಿಸಬೇಕು ಹಾಗೂ ಈ ವಿಚಾರದಲ್ಲಿ ರಾಜ್ಯದ ಎಲ್ಲಾ ಖಾಸಗಿ ಕಾಲೇಜುಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಜೊತೆಗೆ ಬೀದರ್ ನಗರ ಸೇರಿ ರಾಜ್ಯಾದ್ಯಂತ ಇರುವ ವಸತಿ ನಿಲಯ, ವಸತಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಟೀಚಿಂಗ್ ಆ್ಯಂಡ್ ನಾನ್ ಟೀಚಿಂಗ್ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಬೇಕು ಮತ್ತು ಲಾಕ್ ಡೌನ್ ಅವಧಿಯ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯ ಹಣವನ್ನು ಅನೇಕ ಕಡೆ ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಅದರ ಕುರಿತು ಸಮಗ್ರ ತನಿಖೆ ಮಾಡಿ ತಪಿತಸ್ಥರ ಮೇಲೆ ಕ್ರಮ ಜರುಗಿಸಿ ಸಮರ್ಪಕ ಬಳಕೆಗೆ ಮುಂದಾಗಬೇಕೆಂದು ಈ ಮನವಿ ಪತ್ರದ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬೀದರ್ ಜಿಲ್ಲಾಧ್ಯಕ್ಷ ಅರುಣ್ ಕೊಡಗೆ, ಜಿಲ್ಲಾ ಉಪಾಧ್ಯಕ್ಷರಾದ ಅಮರ್ ಗಾದಗಿ, ಸುನೀಲ್, ಪೇನಿಮಾ ಗೌಡ ಸೇರಿದಂತೆ ಇತರರಿದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…