ಸುರಪುರ; ಯಾದಗಿರಿ ಜಿಲ್ಲೆಯಾಗಿ ಹಲವಾರು ವರ್ಷಗಳಾದರು ಇದುವರೆಗೆ ಯಾದಗಿರಿ ಜಿಲ್ಲೆಗೆ ಡಿಸಿಸಿ ಬ್ಯಾಂಕ್ ನೀಡದೆ ಜಿಲ್ಲೆಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಸೇನೆಯ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಒತ್ತಾಯಿಸಿದರು.
ನಗರದ ಡಾ:ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಸೇನೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ಇದುವರೆಗೆ ಕಲಬುರ್ಗಿ ಜಿಲ್ಲಾ ಡಿಸಿಸಿ ಬ್ಯಾಂಕ್‌ನ್ನೆ ಮುಂದುವರೆಸುವ ಮೂಲಕ ಯಾದಗಿರಿ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ.ಕಲಬುರ್ಗಿ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿ ಇರುವುದರಿಂದ ಆ ಜಿಲ್ಲೆಯ ರೈತರಿಗೆ ಹೆಚ್ಚು ಅನುಕೂಲ ಕಲ್ಪಿಸುವ ಮೂಲಕ ಯಾದಗಿರಿ ಜಿಲ್ಲೆಯ ರೈತರು ಆರ್ಥಿಕ ಸಹಾಯದಿಂದ ವಂಚಿತರಾಗುತ್ತಾರೆ.
ಇದರಿಂದ ಜಿಲ್ಲೆಯ ರೈತರು ಸಂಕಷ್ಟ ಹೆದರಿಸುವಂತಾಗಿದೆ.ಆದ್ದರಿಂದ ಕೂಡಲೆ ಸರಕಾರ ಯಾದಗಿರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಜಿಲ್ಲಾ ಕಚೇರಿ ಆರಂಭಿಸ ಬೇಕು ಮತ್ತು ಈಗಾಗಲೆ ಮಳೆಗಾಲ ಆರಂಭವಾಗಿದ್ದರಿಂದ ರೈತರಿಗೆ ಆರ್ಥಿಕತೆಯ ತೊಂದರೆ ಇದ್ದು ಕೂಡಲೆ ಜಿಲ್ಲೆಯ ಎಲ್ಲಾ ವಿಎಸ್‌ಎಸ್‌ಎನ್ ಸಹಕಾರಿ ಬ್ಯಾಂಕ್‌ಗಳಿಂದ ಸಾಲ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಸಿಬ್ಬಂದಿ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗೋಪಾಲ ಬಾಅಗಲಕೋಟೆ, ಮಾನಯ್ಯ ದೊರೆ,ಕೃಷ್ಣಾ ದಿವಾಕರ,ಕೇಶಣ್ಣ ದೊರೆ,ಬಸವರಾಜ ಕವಡಿಮಟ್ಟಿ,ದೇವಪ್ಪ ದೇವರಮನಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…