ಬಿಸಿ ಬಿಸಿ ಸುದ್ದಿ

ಜನನಿ ಕಾಲೇಜು ವಿದ್ಯಾರ್ಥಿನಿಯರಿಂದ ರಕ್ತದಾನ ಜಾಗೃತಿ ಜಾಥಾ

ಸುರಪುರ: ನಗರದ ಶ್ರೀ ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ರೆಡ್ ರಿಬ್ಬನ್ ಕ್ಲಬ್ ಹಾಗೂ ತಾಲೂಕು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಂದ ನಗರದಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವ ಜಾಗೃತಿ ಜಾಥಾ ನಡೆಸಲಾಯಿತು.

ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ ಉಪನ್ಯಾಸಕ ಡಾ. ಮಲ್ಲಿಕಾರ್ಜುನ ಕಮತಗಿ ಮಾತನಾಡಿ,ರಕ್ತದಾನ ಶ್ರೇಷ್ಠದಾನ ಪ್ರತಿಯೊಬ್ಬ ರೋಗಿ ಮತ್ತು ತುರ್ತು ಪರಿಸ್ಥಿತಿ ಇರುವ ಸಂದರ್ಭದಲ್ಲಿ ರಕ್ತದಾನ ಮಾಡಿದರೆ ಒಬ್ಬ ವ್ಯಕ್ತಿಗೆ ಜೀವಾಮೃತ ನೀಡಿದಂತೆ ಹಾಗು ರಕ್ತದಾನ ಮಾಡಿದವರು ಕೂಡ ಉತ್ತಮ ಆರೋಗ್ಯವನ್ನು ಹೊಂದಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ರೆಡ್ ಕ್ರಾಸ್ ವ್ಯವಸ್ಥಾಪಕರಾದ ಆರತಿ ಧನುಶ್ರೀ, ಸಹ ವ್ಯವಸ್ಥಾಪಕರಾದ ಅಮರೇಶ ಭೂತಿ, ಆಪ್ತ ಸಮಾಲೋಚಕರಾದ ಪ್ರದೀಪ್‌ಕುಮಾರ ಮುಖ್ಯ ಅತಿಥಿಗಳಾಗಿದ್ದರು. ಉಪನ್ಯಾಸಕರಾದ ಸುವರ್ಣಾ ಅಂಟೋಳಿಯವರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಮುಸ್ತಫಾ ಮತ್ತು ಸಾಧಿಕ್ ಮೌಲಾನಾ ರವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾದ ಡಾ. ಹಳ್ಳೆಪ್ಪ ಲಿಂಗದಳ್ಳಿ, ಮಹೇಶ ಗಂಜಿ, ಅಂಬ್ರೇಶ ಚಿಲ್ಲಾಳ, ಚಂದ್ರಶೇಖರ ನಾಯಕ, ಬೀರೇಶ ದೇವತ್ಕಲ್, ಮರೆಮ್ಮ ಕಟ್ಟಿಮನಿ, ಮುಂತಾದವರು ಉಪಸ್ಥಿತರಿದ್ದರು.ಕರಿಷ್ಮಾ ಸರಮುದ್ದಿನ್ ನಿರೂಪಿಸಿದರು. ಹುಲಗಮ್ಮ ಶೇಖರ ಪ್ರಾರ್ಥಿಸಿದರು, ಸರಸ್ವತಿ ಸ್ವಾಗತಿಸಿದರು, ಶರಣಮ್ಮ ವಂದಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago