ಬಿಸಿ ಬಿಸಿ ಸುದ್ದಿ

ಎಲ್ಲಾ ವರದಿಗಾರರಿಗೆ ನಿವೇಶನ ಒದಗಿಸಲಾಗುವುದು-ಶಾಸಕ ರಾಜುಗೌಡ ಭರವಸೆ

ಸುರಪುರ: ನಗರದ ಎಲ್ಲಾ ವರದಿಗಾರರಿಗೆ ನಿವೇಶನಗಳನ್ನು ನೀಡಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷರು ಹಾಗು ಶಾಸಕ ನರಸಿಂಹ ನಾಯಕ ರಾಜುಗೌಡ ಮಾತನಾಡಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ತಾಲೂಕು ಘಟಕದ ಪದಾಧಿಕಾರಿಗಳ ನಿಯೋಗದ ಮನವಿಯನ್ನು ಸ್ವೀಕರಿಸಿ ಮಾತನಾಡಿ,ತಮ್ಮೆಲ್ಲರಿಗೂ ನಿವೇಶನ ಒದಗಿಸುವುದು ನನ್ನ ಜವಬ್ದಾರಿಯಾಗಿದೆ.ಆದ್ದರಿಂದ ಶೀಘ್ರದಲ್ಲಿಯೆ ತಮ್ಮೆಲ್ಲ ವರದಿಗಾರರ ಪಟ್ಟಿಯನ್ನು ನೀಡಿದಲ್ಲಿ ನಿವೇಶನ ಒದಗಿಸುವುದಾಗಿ ತಿಳಿಸಿದರು.ಅಲ್ಲದೆ ಸ್ಥಳದಲ್ಲಿದ್ದ ನಗರಸಭೆ ಪೌರಾಯುಕ್ತ ಜೀವನ್‌ಕುಮಾರ ಕಟ್ಟಿಮನಿಯವರಿಗೆ ಸೂಚಿಸಿ ತಾಲೂಕು ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ಗುರುತಿಸಿ ಶೀಘ್ರದಲ್ಲಿಯೆ ಅನುದಾನ ನೀಡುವೆನು ಆದಷ್ಟು ಬೇಗ ಕಾಮಗಾರಿಗೆ ಚಾಲನೆ ನೀಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಕಮಿಷನರ್ ಜೀವನ್‌ಕುಮಾರ ಮಾತನಾಡಿ,ಈಗಾಗಲೇ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದನ್ನು ನಗರಸಭೆ ಮೀಟಿಂಗ್‌ನಲ್ಲಿ ಪಾಸ್ ಮಾಡಲಾಗಿದೆ ಅಲ್ಲದೆ ಕೆಜೆಯು ಸದಸ್ಯರಿಗೆ ನಿವೇಶನವನ್ನು ಗುರುತಿಸಿ ತೋರಿಸಲಾಗಿದೆ,ಶೀಘ್ರದಲ್ಲಿಯೆ ತಮ್ಮ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಅನುಮೋದನೆಗೆ ಕಳುಹಿಸುವುದಾಗಿ ತಿಳಿಸಿದರು.ಆದಷ್ಟು ಬೇಗನೆ ಅನುಮೋದನೆಗೆ ಕಳುಹಿಸಿ ಎಂದು ಶಾಸಕರು ಸೂಚಿಸಿದರು.

ನಂತರ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ವತಿಯಿಂದ ಎಲ್ಲಾ ವರದಿಗಾರರಲಿಗೆ ನಿವೇಶನ ಒದಗಿಸುವ ಜೊತೆಗೆ ಮನೆಗಳನ್ನು ನಿರ್ಮಾಣಗೊಳಿಸಿ ಕೊಡುವಂತೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಕೆಜೆಯು ತಾಲೂಕು ಅಧ್ಯಕ್ಷ ರಾಜು ಕುಂಬಾರ,ಉಪಾಧ್ಯಕ್ಷ ಮಲ್ಲು ಗುಳಗಿ,ಪ್ರಧಾನ ಕಾರ್ಯದರ್ಶಿ ಪರಶುರಾಮ ಮಲ್ಲಿಭಾವಿ,ಖಜಾಂಚಿ ಮಹಾದೇವಪ್ಪ ಕಟ್ಟಿಮನಿ ಹಾಗು ಸದಸ್ಯರಾದ ಮನಮೋಹನ್ ದೇವಾಪುರ,ಕಲೀಂ ಫರೀದಿ, ಶ್ರೀಮಂತ ಚಲುವಾದಿ,ಪುರುಷೋತ್ತಮ ದೇವತ್ಕಲ್,ಮದನ್‌ಲಾಲ ಕಟ್ಟಿಮನಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago