ಭಾಲ್ಕಿ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ನಗರದ ಸದ್ಗುರು ಪ್ರೌಢಶಾಲೆಗೆ ನಿಡಲಾದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಕಾರ್ಯಕ್ರಮ ಸದ್ಗುರು ಪ್ರೌಢಶಾಲೆಯಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಅಲಂಪ್ರಭು ಬಿಇಡಿ ಕಾಲೇಜಿನ ಪ್ರಾಚಾರ್ಯ ಮಾಹದೇವ ಪಟ್ನೆ ಕಾರ್ಯಕ್ರಮ ಉದ್ಘಾಟಿಸಿ ಬಸವರಾಜ ಪಾಟೀಲ ಸೇಡಂಜೀ ಅವರ ಸಾರಥ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.ವಿಶೇಷವಾಗಿ ಶಿಕ್ಷಣ ಕ್ಷೇತ್ರದ ಉತ್ತೇಜನಕ್ಕೆ ಹೆಚ್ಚು ಒತ್ತು ನಿಡ್ಡಿದ್ದಾರೆ. ಸ್ಮಾರ್ಟ್ ಕ್ಲಾಸ್ ಯೊಜನೆ ಯಿಂದ ಮಕ್ಕಳಿಗೆ ಸರಳ ಹಾಗೂ ವಿಶೇಷ ಶಿಕ್ಷಣ ಸಿಕ್ಕಿದಂತಾಗಿದೆ ಎಂದು ನುಡಿದರು.
ಅದೇರೀತಿ ಕಲ್ಯಾಣ ಕರ್ನಾಟಕ ಸಂಘದ ನಿರ್ದೇಶಕರಾದ ರೇವಣಸಿದ್ದಪ್ಪ ಜಲಾದೆ ಮಾತನಾಡಿ ಮಕ್ಕಳಿಗೆ ಆಧುನಿಕ ಶಿಕ್ಷಣ ಹೆಚ್ಚು ಒತ್ತು ಕೊಡುವ ನಿಟ್ಟಿನಲ್ಲಿ, ಸರ್ಕಾರಿ ಖಾಸಗಿ ಸೆರಿದಂತೆ ವಿವಿಧ ಶಾಲೆಗಳಿಗೆ ಗುರುತಿಸಿ ಸಂಘದಿಂದ ಸ್ಮಾರ್ಟ್ ಕ್ಲಾಸ್ ನಿಡಲಾಗುತಿದ್ದು. ಉತ್ತಮ ಶಿಕ್ಷಣಕ್ಕೆ ಪುರಕವಾಗುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಸದ್ಗುರು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸೋಮನಾಥ ಮುದ್ದಾ ಕಾರ್ಯಕ್ರಮದ ಅಧ್ಯಕ್ಷತೆ ಕಲ್ಯಾಣ ಕರ್ನಾಟಕ ಸಂಘವು ಸ್ವಾವಲಂಬಿ ಬದುಕು ಕಟ್ಟಿಕೊಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತಿದ್ದು ಸಂಘದ ಕಾರ್ಯ ಶ್ಲಾಘನೀಯವಾಗಿದೆ ಎಂದು ನುಡಿದರು. ಸದ್ಗುರು ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಕ್ಷಯ ಮುದ್ದಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಸಂಘದ ಜಿಲ್ಲಾ ಪ್ರಮುಖರಾದ ರೇವಣಸಿದ್ದ ಜಾಡರ್, ಅವಿನಾಶ ಮುದ್ದಾ, ಸಂತೋಷ್ ಮೆತ್ತಗೆ, ಸೂನಿನ ಹೊನ್ನ, ಈಶ್ವರ ರುಮ್ಮ, ನಾಗರಾಜ ಶಿಲವಂತ, ಗಣೇಶ ಹಡಪದ ಸೆರಿದಂತೆ ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…