ಬಿಸಿ ಬಿಸಿ ಸುದ್ದಿ

ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲಾ ಇಲಾಖೆಯ ಸಮನ್ವಯತೆ ಮುಖ್ಯ: ಡಾ.ಅಂತೋಣಿ ಸೆಬಾಸ್ಟಿಯನ್

ಕಲಬುರಗಿ: ಮಕ್ಕಳ ಹಕ್ಕು ರಕ್ಷಣೆ ಮಾಡಲು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯತೆ-ಸಹಕಾರ ಇರಬೇಕಾದದ್ದು ಬಹುಮುಖ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಅಂತೋಣಿ ಸೆಬಾಸ್ಟಿಯನ್ ಅವರು ಅಭಿಪ್ರಾಯಪಟ್ಟರು.

ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆರ್.ಟಿ.ಇ-೨೦೦೯, ಪೋಕ್ಸೊ-೨೦೧೨ ಹಾಗೂ ಬಾಲ ನ್ಯಾಯ ಕಾಯ್ದೆ-೨೦೧೫ರ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧಕ್ಷತೆವಹಿಸಿ ಅವರು ಮಾತನಾಡಿದರು.

ಬಾಲ ನ್ಯಾಯ ಕಾಯ್ದೆಯಲ್ಲಿರುವಂತೆ ಮಕ್ಕಳ ಸಂರಕ್ಷಣೆ ಕುರಿತು ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಮಕ್ಕಳ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಡಳಿತ ಕ್ರಮವಹಿಸಿ ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ಪತ್ತೆ ಹಚ್ಚುವುದು, ಬಾಲ್ಯ ವಿವಾಹ ತಡೆಕಟ್ಟುವಿಕೆ ಮುಂತಾದ ಸಾಮಾಜಿಕ ಪಿಡುಗುಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಬೇಕು ಎಂದರು. ಜಿಲ್ಲೆಯಲ್ಲಿ ಪ್ರಸ್ತುತ ಬಾಲ್ಯ ವಿವಾಹ ಪ್ರಕರಣ, ಬಾಲ ಕಾರ್ಮಿಕರ ಪತ್ತೆ ವಿಚಾರ ನಿರ್ವಹಣೆ ಹಿನ್ನೆಲೆಯಲ್ಲಿ ಅಧಿಕಾರಿಗಳ ಬಗ್ಗೆ ಆಯೋಗದ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು.

ಬಾಲ್ಯವಿವಾಹ ಪ್ರಕರಣ ಹೆಚ್ಚಾಗುವುದಕ್ಕೆ ಬಾಲ್ಯ ವಿವಾಹ ನಿಷೇಧ ಅಧಿಕಾರಿಯ ಸಂಪೂರ್ಣ ನಿರ್ಲಕ್ಷವೇ ಕಾರಣ ಎಂದು ಅವರು, ಬಾಲ್ಯ ವಿವಾಹ ನಿಷೇಧ ಅಧಿಕಾರಿ ಸೇರಿದಂತೆ ಪಿಡಿಒ, ಪೊಲೀಸರು, ಅಂಗನವಾಡಿ ಕಾರ್ಯಕರ್ತರು ಪ್ರತಿ ಹಳ್ಳಿ-ಹಳ್ಳಿಗೂ ತೆರಳಿ ಸಮುದಾಯ ಅರಿವು ಕಾರ್ಯಕ್ರಮ ಮಾಡಬೇಕು ಎಂದು ತಿಳಿಸಿದರು. ಬಾಲ್ಯ ವಿವಾಹವು ಸಮಸ್ಯೆಗಳ ಆರಂಭವೇ ಹೊರತು ಇದು ಪರಿಹಾರವಲ್ಲ ಎಂದು ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನು ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಅವರು ತಾಕೀತು ಮಾಡಿದರು. ಆಯೋಗದ ಸದಸ್ಯೆ ಡಾ.ಜಯಶ್ರೀ ಚನ್ನಾಳ ಅವರು  ಮಾತನಾಡಿ ಕೊರೋನಾ ಸಂದರ್ಭದಲ್ಲಿ ಇಡೀ ರಾಜ್ಯದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ವರದಿಯಾಗಿವೆ ಎಂದು ವಿಷಾದ ವ್ಯಕ್ತಪಡಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಎಂ.ಚೌಗಲೆ ಅವರು ಮಾತನಾಡಿ, ಮಕ್ಕಳ ಮೇಲಾಗುವ ದೌರ್ಜನ್ಯ ಪ್ರಕರಣ ತಡೆಗಟ್ಟುವಲ್ಲಿ ಕಾನೂನು ಅರಿವು ಮತ್ತು ತರಬೇತಿಯನ್ನು ವಿವಿಧ ಅಧಿಕಾರಿಗಳಿಗೆ ನೀಡುವುದು ಅಗತ್ಯವಿದೆ. ಹಲವು ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಪೋಕ್ಸೊ ಕಾಯ್ದೆ ಬಗ್ಗೆ ಪೂರ್ಣ ತಿಳಿವಳಿಕೆ ಇಲ್ಲ ಎಂದರು.

ಬಾಲಕ ಸಾವು, ಸ್ವಯಂ ದೂರು: ಕಲಬುರಗಿ ನಗರದ ಎನ್.ಜಿ.ಒ. ಕಾಲೋನಿಯ ಸಮೀಪದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಏಳು ವರ್ಷದ ಬಾಲಕ ಮೃತಪಟ್ಟ ಘಟನೆಗೆ ಸಂಬಂಧಿಸಿ ಆಯೋಗದ ಸದಸ್ಯರಾದ ಹೆಚ್.ಸಿ.ರಾಘವೇಂದ್ರ, ಡಿ. ಶಂಕ್ರಪ್ಪ,  ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ಸಂಬಂಧ ಸ್ವಯಂ ದೂರು ದಾಖಲಿಸಿಕೊಂಡರು. ಇದಲ್ಲದೇ ಕಲಬುರಗಿ ಗ್ರಾಮೀಣ ಠಾಣೆಗೆ ಆಯೋಗದವತಿಯಿಂದ ಭೇಟಿ ನೀಡಿ ಮಕ್ಕಳಿಗೆ ಸಂಬಂಧಿಸಿ ದಾಖಲಾದ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಭೆಯಲ್ಲಿ ಆಯೋಗದ ಸದಸ್ಯರಾದ ಭಾರತಿ, ಅಶೋಕ ಜಿ.ಯರಗಟ್ಟಿ, ಪರಶುರಾಮ್ ಎಂ.ಎಲ್,  ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಡಿಸಿಪಿ ಅಡೂರು ಶ್ರೀನಿವಾಸುಲು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ  ನವೀನ ಕುಮಾರ, ಜಿಲ್ಲಾ ರಕ್ಷಣಾಧಿಕಾರಿ ಶರಣಬಸಪ್ಪ ಬೆಳಗುಂಪಿ, ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ್ ಶೀಲವಂತರ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago