ಸಮುದಾಯ ಭವನವು ಒಳ್ಳೆಯ ಕೆಲಸಗಳಿಗೆ ಬಳಕೆಯಾಗಲಿ : ಮತ್ತಿಮಡು

0
39

ಶಹಾಬಾದ:ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನವು ಒಳ್ಳೆಯ ಕೆಲಸಗಳಿಗೆ ಬಳಕೆಯಾಗಲಿ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಅವರು ನಗರದ ಅಪ್ಪರ ಮಡ್ಡಿಯಲ್ಲಿ ಎಸ್‍ಸಿಪಿ ಟಿಎಸ್‍ಪಿ ಯೋಜನಯಡಿ ಸುಮಾರು 75 ಲಕ್ಷ ರೂ. ಅನುದಾನದಲ್ಲಿ ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದರು.

Contact Your\'s Advertisement; 9902492681

ಎಲ್ಲಾ ಸಮುದಾಯಗಳಿಗೆ ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸಿಕೊಟ್ಟ ಅಂಬೇಡ್ಕರ್ ಅವರ ಹಾದಿಯಲ್ಲಿ ಎಲ್ಲರೂ ನಡೆದು ನೆಮ್ಮದಿಯ ಸಮಾಜ ನಿರ್ಮಿಸೋಣ.ಅಲ್ಲದೇ ನಗರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಲಾಗಿದೆ.ಇನ್ನೂ ಅನುದಾನ ಒದಗಿಸಲು ಸಿದ್ಧ.ಆದರೆ ಅದಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಹೇಳಿದರು.

ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಮಾತನಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಈ ಹಿಂದೆ ಮನವಿ ಸಲ್ಲಿಸಿದಾದ ಸಮಾಜ ಕಲ್ಯಾಣ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರು ಎಸ್‍ಸಿಪಿ ಟಿಎಸ್‍ಪಿ ಯೋಜನಯಡಿ ಅನುದಾನ ಒದಗಿಸಿದ್ದರು.

ನಂತರ ಶಾಸಕರಾದ ಬಸವರಾಜ ಮತ್ತಿಮಡು ಅವರು ಯಾವುದೇ ಪಕ್ಷಪಾತ ಮಾಡದೇ ಸಮುದಾಯ ನಿರ್ಮಾಣಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ಅಲ್ಲದೇ ಭೂಮಿ ಪೂಜೆಯೂ ನೇರವೇರಿಸಿ ಕೊಟ್ಟಿರುವುದು ಅತ್ಯಂತ ಖೂಷಿ ತಂದು ಕೊಟ್ಟಿದೆ ಎಂದರು.ಅಲ್ಲದೇ ಶಾಸಕರು ನಗರಸಭೆಯ ಕಟ್ಟಡಕ್ಕೆ ಹಾಗೂ ನಗರದ ಅಭಿವೃದ್ಧಿಗಾಗಿ ಅನುದಾನ ಒದಗಿಸಬೇಕೆಂದು ಮನವಿ ಮಾಡಿದರು.

ತಹಸೀಲ್ದಾರ ಸುರೇಶ ವರ್ಮಾ,ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ನಗರಸಬೆಯ ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ನಾಗರಾಜ ಮೇಲಗಿರಿ, ನಿಂಗಣ್ಣ ಹುಳಗೋಳಕರ್, ಬಸವರಾಜ ಮದ್ರಕಿ, ಅಣ್ಣಪ್ಪ ದಸ್ತಾಪೂರ ಸೇರಿದಂತೆ ನಗರಸಭೆಯ ಸದಸ್ಯರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here