ಕಲಬುರಗಿ: ಖಜಾನೆ ಆಯುಕ್ತರು ಅಕ್ಟೋಬರ್ ೧ ನ್ನು ಎನ್‌ಪಿಎಸ್ ದಿನ ಎಂದು ಆಚರಿಸಲು ಆದೇಶ ಮಾಡಿರುವುದನ್ನು ಕೂಡಲೇ ಹಿಂಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಧರ್ಮರಾಜ ಜವಳಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಏಪ್ರೀಲ್ ೨೦೦೬ರ ನಂತರ ರಾಜ್ಯ ಸರ್ಕಾರಿ ನೌಕರಿಗೆ ಸೇರಿದ ಸುಮಾರು ೩ ಲಕ್ಷ ೩೫ ಸಾವಿರ ನೌಕರರ ಪಿಂಚಣಿಯಿಂದ ವಂಚಿತರಾಗಿದ್ದು, ನಿವೃತ್ತ ನಂತರ ಇವರಿಗೆ ಪಿಂಚಣಿ ಇರುವುದಿಲ್ಲ. ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತಾರಾಮ ತೇಜ್ ಅವರ ನೇತೃತ್ವದಲ್ಲಿ ಸುಮಾರು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದೆವೆ.ಪ್ರೀಡಂ ಪಾರ್ಕ್ ಚಲೋ,ಬೆಳಗಾವಿ ಸುವರ್ಣಸೌಧ ಚಲೋ, ರಕ್ತ ಕೊಟ್ಟೆವು ಪಿಂಚಣಿ ಬಿಡೆವು. ಹೀಗೆ ಹಲವಾರು ಬಾರಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಖಜಾನೆ ಇಲಾಖೆಯು ಅಕ್ಟೋಬರ್ ೧ ರಂದ್ದು ಎನ್‌ಪಿಎಸ್ ದಿನಾಚರಣೆ ಘೋಷಣೆ ಮಾಡಿರುವುದು ಖಂಡನೀಯವಾಗಿದೆ ಎಂದು ಧರ್ಮರಾಜ ಜವಳಿ ತಿಳಿಸಿದ್ದಾರೆ.
ಎನ್‌ಪಿಎಸ್ ಆಚರಣೆಗೆ ಆದೇಶ ನೀಡಿದ ಖಜಾನೆ ಆಯುಕ್ತಾಲಯದಿಂದ ಶೀಘ್ರ ಈ ಆದೇಶವನ್ನು ರದ್ದುಪಡಿಸದಿದ್ದರೇ ಮುಂಬರುವ ದಿನಗಳಲ್ಲಿ ವಿವಿಧ ರೀತಿಗಳಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…