ಕಲಬುರಗಿ: ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ೨೧ ನೇ ವರ್ಷದ ‘ಅಮ್ಮ ಪ್ರಶಸ್ತಿ’ಗಾಗಿ ೨೦೨೦-೨೧ ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ ೨೦ ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುದ್ದು, ಈಗ ‘ಅಮ್ಮ ಪ್ರಶಸ್ತಿ’ಗೆ ೨೧ ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ’ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ ೩೦ ಕೊನೆಯ ದಿನಾಂಕವಾಗಿರುತ್ತದೆ. ಆಯ್ಕೆಯಾದ ಐದು ಕೃತಿಗಳಿಗೆ ತಲಾ ಐದು ಸಾವಿರ ರೂ.ನಗದು ಪುರಸ್ಕಾರ, ಪ್ರಮಾಣ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ: ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರು, ಸಂಚಾಲಕಿ, “ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಪಿ.ಡಬ್ಲ್ಯೂ.ಡಿ. ಕಚೇರಿ ಹತ್ತಿರ, ಸೇಡಂ-585 222. ಕಲಬುರಗಿ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್: 9731666052 ಕ್ಕೆ ಸಂಪರ್ಕಿಸಬಹುದು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…