ಕಲಬುರಗಿ: ಕಲಬುರಗಿ ಗ್ರಾಮೀಣ ಹಾಗೂ ನಗರ ಬಿಜೆಪಿ ಘಟಕದಿಂದ ಸಿಎಂ ಕುಮಾರಸ್ವಾಮಿಯವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ನಗರದ ಸರ್ದಾರ್ ಪಟೇಲ ವೃತ್ತದಲ್ಲಿ ಪ್ರತಿಭಟನೆ ನಡೆಯಿತ್ತು.
ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು ಸಂಪೂರ್ಣವಾಗಿ ಬಹುಮತ ಕಳೆದುಕೊಂಡಿದ್ದಾರೆ ಹೀಗಾಗಿ ವ್ಯರ್ಥವಾಗಿ ಸಮಯ ಕಳೆಯದೆ ರಾಜ್ಯದ ಆರುವರೆ ಕೋಟಿ ಜನರಿಗೋಸ್ಕರ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಈ ಸಂದರ್ಭದಲ್ಲಿ ಒತ್ತಾಯಿಸಿ, ಒಂದು ವೇಳೆ ರಾಜೀನಾಮೆ ಕೊಡದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ವಾಲ್ಮೀಕಿ ನಾಯಕ, ಮುಖಂಡ ಸುಭಾಷ್ ಬಿರಾದಾರ್, ಸಂಗಮೇಶ್ ನಾಗನಹಳ್ಳಿ, ಸಂಜಯ್ ಮಿಸ್ಕಿನ್, ಶಿವಯೋಗಿ ನಾಗನಹಳ್ಳಿ, ರಾಜೇಂದ್ರ ಕರೆಕಲ್, ರಾಣೋಜಿ ದೊಡ್ಮನಿ, ಮಹಾನಗರ ಪಾಲಿಕೆ ಸದಸ್ಯ ಪ್ರಭು ಹಾದಿಮನಿ, ಈರಣ್ಣ ಹೊನ್ನಳ್ಳಿ, ಚಂದ್ರಕಾಂತ್ ಕೆಸರಟ್ಟಿ, ರಾಜು ನರುಣಿ, ಅಶೋಕ್ ಹೌದೇ, ಮಹದೇವ್ ಬೆಳಮಗಿ, ಸಂಗಮೇಶ್ವರ ರಾಜೋಳಿ, ಶ್ವೇತ ಸಿಂಗ್, ವಿಜಯಲಕ್ಷ್ಮಿ ಗೊಬ್ಬುರ್, ಅರವಿಂದ ನವುಲೆ, ಸಾಹೇಬ್ ಗೌಡ ಪಾಟೀಲ್, ಮಲ್ಲೂ ಉದ್ನೂರ್, ಸಂತೋಷ್ ಹರಸುರ್, ಸಂತೋಷ್ ಹಾದಿಮನಿ, ಎಸ್ ಜಿ ಭಾರತಿ, ಅನಿಲ್ ಜಾದವ್ ,ಸಂಗಣ್ಣ ಈಜೇರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…