ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ: ಸರಕಾರದ ವಿರುದ್ಧ ಶಿಕ್ಷಕರ ಆಕ್ರೋಶ

0
155

ಕಲಬುರಗಿ: ಇಂದು ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್ ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಗಳು ತಮ್ಮ ವಿವಿಧ ಬೇಡಿಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Contact Your\'s Advertisement; 9902492681

ಬ್ರಹತ್ ಪ್ರತಿಭಟನಾ ಮೆರವಣಿಗೆಯ ನೇತೃತ್ವವಹಿಸಿದ ಶಿಕ್ಷಕರ ನೌಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಮಲ್ಲಯ್ಯಾ ಬಿ. ಗುತ್ತೇದಾರ ಮಾತನಾಡಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಮಿಕ ಶಾಲಾ ಶಿಕ್ಷಕರ ನ್ನು ಪದವಿಧರ ಶಿಕ್ಷಕರೆಂದು ಪರಿಗಣಿಸಿ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಭೇಕು , ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವುದು ಹಳೇ ಪಿಂಚಣಿ ಯೋಜನೆಯನೇ ಮುಂದುವರಿಬೇಕು ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗದೆ ಇರುವುದರಿ ಮತ್ತೊಮ್ಮೆ ವರ್ಗಾವಣೆಯ ನಡೆಸಬೇಕು ಎಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.

ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಆರಂಭಿಸಬೇಕು  ವಿದ್ಯಾರ್ಥಿಗಳ ಅನುಪಾತ ಅನುಸಾರ ಹೆಚ್ಚುವರಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು ಇನ್ನಿತರ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಅವರು ಮತನಾಡಿದರು ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳಿಗೆ ಬಗ್ಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ  ಪ್ರಧಾನ ಕಾರ್ಯದರ್ಶಿಯಾದ ಸಿದ್ಧಾರಾಮ ಗುಣಾರಿ, ಮುಖಂಡರಾದ ಪರಮೇಶ್ವರ ದೇಸಾಯಿ, ಜಯಶ್ರೀ ಕಟ್ಟಿಸಂಗಾವಿ ,ಶಿವಕುಮಾರ ಬಿರಾದಾರ , ಬಾಬು ನಾಯಕ, ಚನ್ನಮ್ಮ ಗೊಬ್ಬುರಕರ,ಮಲ್ಲಣ್ಣ ಮೇತ್ರಿ , ಅಂಬುಬಾಯಿ ಕಲಶೆಟ್ಟಿ ಇಂತಹ ಪದಾಧಿಕಾರಿಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಶಿಕ್ಷಕ-ಶಿಕ್ಷಕಿಯರು ಬ್ರಹತ ಪ್ರತಿಭಟನಾ ಮೆರವಣೆಗೆ ನಡೆಸುವ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಸಾಗಿ ,ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here