ಬಿಸಿ ಬಿಸಿ ಸುದ್ದಿ

೩೨ ಮಂದಿ ರಕ್ತದಾನ-ಸಂಘಟನೆಗಳಿಂದ ಸಮಾಜ ಕಾರ್ಯದ ಒಲವು ಹೆಚ್ಚಳ: ಶ್ರೀ ಶ್ಲಾಘನೆ

ಆಳಂದ: ಕನ್ನಡ ನಾಡು, ನುಡಿಗೆ ಧ್ವನಿಯಾಗಿ ಸಮಾಜ ಕಾರ್ಯದಲ್ಲಿ ತೊಡಗುತ್ತಿರುವ ಕನ್ನಡಪರ ಸಂಘಟನೆಗಳು ವಿಶೇಷವಾಗಿ ಜಯಕರ್ನಾಟಕ ಜನಪರ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಮಾದನಹಿಪ್ಪರಗಾ ಶಿವಲಿಂಗೇಶ್ವರ ವಿರಕ್ತ ಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಗುರುಭವನದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಆಯೋಜಿಸಿದ್ದ ಮಹಾತ್ಮಗಾಂಧೀಜಿ ಜನ್ಮದಿನ ಹಾಗೂ ಪದಾಧಿಕಾರಿಗಳ ಸಮಾವೇಶ, ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್. ಕೋರಳ್ಳಿ ಅವರ ೩೭ನೇ ಹುಟ್ಟು ಹಬ್ಬದ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರ, ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಫಲ ಹಾಗೂ ಮಿನಿವಿಧಾನಸೌಧ ಆವರಣದಲ್ಲಿ ಸಿಸಿ ನೆಡುವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಕಾರ್ಯಕರ್ತರು ಜನ್ಮದಿನವನ್ನು ಆಡಂಭರಗೊಳಿಸದೆ ಗಾಂಧೀಜಿ ಅವರ ಜನ್ಮದಿನ ಆಚರಿಸಿ ದುಂದು ವೆಚ್ಚ ಮಾಡದೆ ಸರಳ ರೀತಿಯಿಲ್ಲಿ ಆಚರಿಸುವ ಮೂಲಕ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ರಕ್ತದಾನ ಶಿಬಿರ ಆಯೋಜಿಸಿದ್ದು ಇನ್ನೊಬ್ಬರಿಗೆ ಮಾದರಿಯಾಗಿದೆ. ಬಸವರಾಜ ಕೊರಳ್ಳಿ ನಾಡು, ನುಡಿ ಜನಪರ ಸಮಸ್ಯೆಗಳಿಗೆ ಧ್ವನಿಯಾಗಿ ಕೈಗೊಳ್ಳುವ ನಿರಂತರ ಹೋರಾಟಕ್ಕೆ ಯುವ ಪಡೆ ಮುಂದಾಗಿರುವುದು ಅವರ ಕಾರ್ಯ ಸದಾ ಯಶಸ್ವಿಯಾಗಿ ಜನ ಸಾಮಾನ್ಯರಿಗೆ ನ್ಯಾಯ ದೊರೆಯಲಿ ಎಂದು ಹಾರೈಸಿದ ಶ್ರೀಗಳು ಸಂಘಟನೆಗಳಿಂದ ಸಮಾಜ ಮುಖಿ ಕಾರ್ಯ ಇಂದಿನ ಅಗತ್ಯವಾಗಿದೆ. ಇಂಥ ಕಾರ್ಯಕ್ಕೆ ಸಮಾಜ ಮತ್ತು ಸರ್ಕಾರ ಸ್ಪಂದಿಸಬೇಕಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಕಲಬುರಗಿ ಹಾಗೂ ಯಾದಗಿರಿ ಜಿಲ್ಲಾ ಕೆಎಂಎಫ್ ಅಧ್ಯಕ್ಷ ಆರ್.ಕೆ. ಪಾಟೀಲ, ಸಂಘಟನೆಯ ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್. ಕೊರಳ್ಳಿ, ಕೆಕೆಆರ್‌ಟಿಸಿ ನಿರ್ದೇಶಕ ಮಲ್ಲಿಕಾರ್ಜುನ ತಡಕಲ್, ಬಿಜೆಪಿ ಮಂಡಲ ಅಧ್ಯಕ್ಷ ಆನಂದ ಬಿರಾದಾರ ಕೊರಳ್ಳಿ ಮತ್ತಿತರು ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಸದಸ್ಯ ಸಚೀನ ಕಡಗಂಚಿ, ಮುಖಂಡ ಪ್ರಶಾಂತ ಅಂಕಲಗಿ, ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಚಿನ್ನು ಪಾಟೀಲ, ವಿಜಯಕುಮಾರ ಹತ್ತರಕಿ, ಪಶು ವೈದ್ಯ ಮಹಾಂತೇಶ ಪಾಟೀಲ, ಸಂಘಟನೆಯ ಜಿಲ್ಲಾ ಮುಖಂಡ ಶಂಕರ ಜಮಾದಾರ, ಅಫಜಲಪೂರ ಅಧ್ಯಕ್ಷ ಸದಾಶಿವ ಛತ್ರಿ, ತಾಲೂಕು ಅಧ್ಯಕ್ಷ ನಾಗರಾಜ ಘೋಡಕೆ, ಶರಣು ಕುಲಕರ್ಣಿ, ಸುನೀಲ ಐರೋಡಗಿ, ಸಿದ್ಧರೂಢ ಸರಸಂಬಿ, ನಾಗರಾಜ್ ಆರ್ಯ, ಅಜಯ ಸಿಎಂ, ಅಮೀತ ಪಾಟೀಲ, ಅಶೋಕ ಪಾಟೀಲ ಮತ್ತಿತರು ಉಪಸ್ಥಿತರಿದ್ದರು. ವೆಂಕಟೇಶ ಇಳಿಗಾರ ನಿರೂಪಿಸಿದರು. ರಾಜಕುಮಾರ ಕೋಷ್ಠಿ ಸ್ವಾಗತಿಸಿದರು. ಚಂದ್ರಶೇಖರ ಕಟ್ಟಿಮನಿ ವಂದಿಸಿದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

6 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

17 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

17 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

19 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

19 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

19 hours ago