ಬಿಸಿ ಬಿಸಿ ಸುದ್ದಿ

ಕಲಾಕ್ಷೇತ್ರದಲ್ಲಿ ಕಲಾ ಪ್ರದರ್ಶನ ನಿರ್ವಹಣೆ ತುಂಬಾ ಮುಖ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಮಹಿಳಾ ಚಿತ್ರಕಲಾವಿದರು ತಮ್ಮ ಸಂಕೋಚ ಸ್ವಭಾವದಿಂದ ಹೊರಬಂದು ಹೆಚ್ಚಿನ ಸಂಖ್ಯೆಯಲ್ಲಿ ಕಲಾ ಪ್ರದರ್ಶನಗಳನ್ನು ಏರ್ಪಡಿಸಿ, ದೃಶ್ಯಕಲಾ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಬೇಕೆಂದು ಚೈತನ್ಯಮಯಿ ಆರ್ಟ್ ಗ್ಯಾಲರಿಯ ನಿರ್ದೇಶಕ ಡಾ.ಎ.ಎಸ್.ಪಾಟೀಲ್ ಹೇಳಿದರು.

ಬೀದರನ ಯುವ ಚಿತ್ರಕಲಾವಿದೆ ಲಕ್ಷ್ಮೀಬಾಯಿ ಚಳಕಾಪುರೆ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧನಸಹಾಯದೊಂದಿಗೆ ಏರ್ಪಡಿಸಿದ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಕಲಾವಿದರ ಚಿತ್ರಕಲಾಕೃತಿಗಳು ಸಾರ್ವಜನಿಕವಾಗಿ ಪ್ರದರ್ಶನಗೊಂಡಾಗ ಆ ಕಲಾಕೃತಿ ರಚಿಸಿದಕ್ಕೂ ಸಾರ್ಥಕವಾಗುತ್ತದೆ. ನೋಡುಗ ಹಾಗೂ ಕಲಾವಿದರ ನಡುವೆ ಸಂಬಂಧ ಏರ್ಪಡುತ್ತದೆ. ಯುವ ಚಿತ್ರಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರತಿಭಾವಂತ ಚಿತ್ರಕಲಾವಿದರನ್ನು ಗುರುತಿಸಿ ಧನ ಸಹಾಯ ನೀಡುತ್ತದೆ. ಇದರ ಸದುಪಯೋಗ ಪಡೆಯಬೇಕೆಂದು ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯ ದೃಶ್ಯಕಲಾ ವಿಭಾಗದ ಉಪನ್ಯಾಸಕ ಡಾ.ಪರಶುರಾಮ ಪಿ. ಮುಖ್ಯ ಅತಿಥಿಯಾಗಿ ಮಾತನಾಡಿ ಕಲ್ಯಾಣ ಕರ್ನಾಟಕ ಭಾಗದ ಚಿತ್ರಕಲಾವಿದರು ಉತ್ತಮ ಗುಣಮಟ್ಟದ ಚಿತ್ರಕಲಾಕೃತಿಗಳನ್ನು ರಚಿಸುತ್ತಾರೆ. ಆದರೆ ಅವುಗಳನ್ನು ಸರಿಯಾದ ಕ್ರಮದಲ್ಲಿ ಕಲಾ ಪ್ರದರ್ಶನ ಏರ್ಪಡಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಭಾಗದ ಕಲಾವಿದರು ಕಲಾ ಪ್ರದರ್ಶನದ ನಿರ್ವಹಣೆ ಕುರಿತು ಹೆಚ್ಚು ಗಮನಹರಿಸಿ ತಮ್ಮ ಸಂವಹನ ಕೌಶಲ್ಯವನ್ನು ಉತ್ತಮ ಪಡಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.

ದಿ ಆರ್ಟ್ ಇಂಟಿಗ್ರೇಷನ್ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎಚ್.ಬೆಳಮಗಿ ಮಾತನಾಡಿ ’ಚಿತ್ರಕಲೆಯು ಮಹತ್ತರವಾದ ಮಾಧ್ಯಮವಾಗಿದ್ದು, ಈ ಕ್ಷೇತ್ರದಲ್ಲಿ ಹಲವಾರು ವಿದ್ಯಾರ್ಥಿಗಳು ಬದುಕು ಕಟ್ಟಿಕೊಂಡಿದ್ದಾರೆ ಎಂದರು.

ಬಿ.ಎನ್.ಪಾಟೀಲ್ ನಿರೂಪಿಸಿ ಸ್ವಾಗತಿಸಿ, ವಂದಿಸಿದರು. ಚಿತ್ರಕಲಾವಿದ ಬಸವರಾಜ ಎಲ್.ಜಾನೆ, ಡಾ.ಅಶೋಕ ಶೆಟಕಾರ್, ನಿಂಗಣ್ಣ ಡಿ.ಕೇರಿ, ಬಸವರಾಜ ಕಮಾಜಿ, ದತ್ತಾತ್ರೇಯ ಇಕ್ಕಳಕಿ ಮತ್ತು ಅನೇಕ ಕಲಾವಿದ್ಯಾರ್ಥಿಗಳು ಇದ್ದರು. ನಗರದ ಅಂಕುರ ಆರ್ಟ್ ಗ್ಯಾಲರಿ, ದಿ ಆರ್ಟ್ ಇಂಟಿಗ್ರೇಷನ್ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಲಕ್ಷ್ಮೀಬಾಯಿ ಚಳಕಾಪುರೆ ರಚಿಸಿದ ಕಲಾಕೃತಿಗಳು ಮೂರು ದಿನ ಅಕ್ಟೋಬರ ೭ರವರೆಗೆ ಪ್ರದರ್ಶನಗೊಳ್ಳಲಿವೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

6 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

6 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

8 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

8 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

8 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

8 hours ago