ಚೌಡೇಶ್ವರಿಹಾಳ ಗ್ರಾಮದಲ್ಲಿ ದುಷ್ಕರ್ಮಿಯಿಂದ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ:ಮಹಿಳೆ ಸಾವು

0
10

ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಹಿಳೆಯೊಬ್ಬಳಿಗೆ ದುಷ್ಕರ್ಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಜರುಗಿದೆ.

ಭಾನುವಾರ ರಾತ್ರಿ ಪಾಲಮ್ಮ ಎನ್ನುವ ಮಹಿಳೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಗಂಡ ಮನೆಯಲ್ಲಿ ಇಲ್ಲದ್ದನ್ನು ನೋಡಿದ ದುಷ್ಕರ್ಮಿ ಗಂಗಪ್ಪ ಎನ್ನುವವನು ಮಹಿಳೆಯ ಬಳಿಗೆ ಹೋಗಿದ್ದಾನೆ,ಅಲ್ಲದೆ ಆಕೆಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ನಂತರ ಮಹಿಳೆ ಅವನನ್ನು ನೂಕಿದಾಗ ಸೆಟ್ಟಿಗೆದ್ದು ಬೈಕ್‍ಲ್ಲಿನ ಪೆಟ್ರೋಲ್ ತಂದು ಮಹಿಳೆ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಗಾಯಗೊಂಡ ಮಹಿಳೆಯ ಸಂಬಂಧಿಕರು ಆರೋಪಿಸಿ ದೂರು ದಾಖಲಿಸಿದ್ಧಾರೆ.

Contact Your\'s Advertisement; 9902492681

ಗಾಯಗೊಂದ ಮಹಿಳೆಯನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು,ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಆಸ್ಪತ್ರೆಗೆ ರವಾನಿಸಲಾಗಿತ್ತು,ಆದರೆ ಸೋಮವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾಳೆ.ಈ ಕುರಿತು ಸುರಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು,ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ ಮೂಲಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here