ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಹಿಳೆಯೊಬ್ಬಳಿಗೆ ದುಷ್ಕರ್ಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಜರುಗಿದೆ.
ಭಾನುವಾರ ರಾತ್ರಿ ಪಾಲಮ್ಮ ಎನ್ನುವ ಮಹಿಳೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಗಂಡ ಮನೆಯಲ್ಲಿ ಇಲ್ಲದ್ದನ್ನು ನೋಡಿದ ದುಷ್ಕರ್ಮಿ ಗಂಗಪ್ಪ ಎನ್ನುವವನು ಮಹಿಳೆಯ ಬಳಿಗೆ ಹೋಗಿದ್ದಾನೆ,ಅಲ್ಲದೆ ಆಕೆಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ನಂತರ ಮಹಿಳೆ ಅವನನ್ನು ನೂಕಿದಾಗ ಸೆಟ್ಟಿಗೆದ್ದು ಬೈಕ್ಲ್ಲಿನ ಪೆಟ್ರೋಲ್ ತಂದು ಮಹಿಳೆ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಗಾಯಗೊಂಡ ಮಹಿಳೆಯ ಸಂಬಂಧಿಕರು ಆರೋಪಿಸಿ ದೂರು ದಾಖಲಿಸಿದ್ಧಾರೆ.
ಗಾಯಗೊಂದ ಮಹಿಳೆಯನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು,ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಆಸ್ಪತ್ರೆಗೆ ರವಾನಿಸಲಾಗಿತ್ತು,ಆದರೆ ಸೋಮವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾಳೆ.ಈ ಕುರಿತು ಸುರಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು,ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ ಮೂಲಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…